ಶ್ರೀಲಂಕಾ ವಿರುದ್ಧದ ಮುಂದಿನ ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯ!
ಶ್ರೀಲಂಕಾ ವಿರುದ್ಧದ ಐದನೇ ಏಕದಿನ ಪಂದ್ಯ ಮತ್ತು ಏಕೈಕ ಟಿ20 ಪಂದ್ಯದಿಂದ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹೊರಗುಳಿಯಲಿದ್ದಾರೆ...

Published On :
ನವದೆಹಲಿ: ಶ್ರೀಲಂಕಾ ವಿರುದ್ಧದ ಐದನೇ ಏಕದಿನ ಪಂದ್ಯ ಮತ್ತು ಏಕೈಕ ಟಿ20 ಪಂದ್ಯದಿಂದ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಹೊರಗುಳಿಯಲಿದ್ದಾರೆ.
ಶಿಖರ್ ಧವನ್ ಅವರ ತಾಯಿ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಲಂಕಾದಲ್ಲಿರುವ ಶಿಖರ್ ಧವನ್ ನಾಳೆ ತವರಿಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮುಂದಿನ ಎರಡು ಪಂದ್ಯಗಳಿಗೂ ಧವನ್ ಅಲಭ್ಯರಾಗಲಿದ್ದಾರೆ.
ಲಂಕಾ ವಿರುದ್ಧದ ನಾಲ್ಕು ಏಕದಿನ ಪಂದ್ಯಗಳಲ್ಲಿ ಶಿಖರ್ ಧವನ್ ಒಟ್ಟಾರೆ 190 ರನ್ ಗಳನ್ನು ಸಿಡಿಸಿದ್ದಾರೆ. ಇನ್ನು ಇದಕ್ಕೂ ಮುಂಚೆ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶಿಖರ್ ಧವನ್ 358 ರನ್ ಗಳನ್ನು ಸಿಡಿಸಿದ್ದರು.
ಇನ್ನು ಶಿಖರ್ ಧವನ್ ಸ್ಥಾನವನ್ನು ಆರಂಭಿಕ ಆಟಗಾರ ಅಜಿಂಕ್ಯ ರಹಾನೆ ತುಂಬಲಿದ್ದಾರೆ. ನಾಳಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಜತೆಯಾಗಿ ರಹಾನೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


