ಏಕದಿನ ಕ್ರಿಕೆಟ್: ಸ್ಟಂಪಿಂಗ್ ಶತಕ ಸಿಡಿಸಿ ವಿಶ್ವದಾಖಲೆ ಬರೆದ ಧೋನಿ
ಟೀಂ ಇಂಡಿಯಾದ ಚಾಣಾಕ್ಷ ಕೀಪರ್ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್...

Published On :
ಕೊಲಂಬೊ: ಟೀಂ ಇಂಡಿಯಾದ ಚಾಣಾಕ್ಷ ಕೀಪರ್ ಎಂದೇ ಖ್ಯಾತಿ ಪಡೆದಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಭಾನುವಾರ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ 100 ಸ್ಟಂಪಿಂಗ್ ಮಾಡುವ ಮೂಲಕ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಸ್ಟಂಪಿಂಗ್ ಮಾಡಿದ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಇಂದು ಶ್ರೀಲಂಕಾದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಅವರ 301ನೇ ಪಂದ್ಯದಲ್ಲಿ ಧೋನಿ ಈ ಸಾಧನೆ ಮಾಡಿದ್ದು, ಯಜುವೇಂದ್ರ ಚಹಾಲ್ ಎಸೆದ 45ನೇ ಓವರ್‌ನಲ್ಲಿ ಅಖಿಲ ಧನಂಜಯ ಅವರನ್ನು ಔಟ್ ಮಾಡಿದರು. ಈ ಮೂಲಕ ಧೋನಿ ಏಕದಿನ ಕ್ರಿಕೆಟ್‌ನಲ್ಲಿ 100 ಸ್ಟಂಪಿಂಗ್ ಮಾಡಿದ ವಿಶ್ವದ ಮೊದಲ ವಿಕೆಟ್ ಕೀಪರ್ ಎನಿಸಿದರು.
ಮಹೇಂದ್ರ ಸಿಂಗ್ ಧೋನಿ ಅವರು ಹರ್ಭಜನ್ ಸಿಂಗ್ ಬೌಲಿಂಗ್ ನಲ್ಲಿ ಅತಿ ಹೆಚ್ಚು(15) ಸ್ಟಂಪಿಂಗ್ ಮಾಡಿದ್ದಾರೆ
ಸದ್ಯ ಎರಡನೇ ಸ್ಥಾನದಲ್ಲಿರುವ ಶ್ರೀಲಂಕಾ ಕ್ರಿಕೆಟಿಗ ಕುಮಾರ ಸಂಗಾಕ್ಕರ ಅವರು ಸ್ಟಂಪಿಂಗ್ ಮೂಲಕ 99 ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ಹಾದಿ ತೋರಿದ್ದಾರೆ. ಉಳಿದಂತೆ ಶ್ರೀಲಂಕಾದ ಕಲುವಿತರನ(75), ಪಾಕಿಸ್ತಾನದ ಮೋಯಿನ್ ಖಾನ್(73), ಆಸ್ಟ್ರೇಲಿಯಾದ ಆ್ಯಡಂ ಗಿಲ್‌ಕ್ರಿಸ್ಟ್(55) ಅವರು ಕ್ರಮವಾಗಿ 3, 4, 5ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


