ವಿರಾಟ್ ಕೊಹ್ಲಿ ವಿಕೆಟ್ ಕಿತ್ತ ಮಲಿಂಗಾ ಜತೆ ರೋಹಿತ್ ಶರ್ಮಾ ಸಂಭ್ರಮಿಸಿದ್ದು ಯಾಕೆ ಗೊತ್ತಾ!
ಭಾರತ ಮತ್ತು ಶ್ರೀಲಂಕಾ ವಿರುದ್ಧದ ನಾಲ್ಗನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಕಿತ್ತ ಶ್ರೀಲಂಕಾ ವೇಗಿ ಲಸಿತ್ ಮಲಿಂಗಾ...

Published On :
ಕೊಲಂಬೊ: ಭಾರತ ಮತ್ತು ಶ್ರೀಲಂಕಾ ವಿರುದ್ಧದ ನಾಲ್ಗನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಕಿತ್ತ ಶ್ರೀಲಂಕಾ ವೇಗಿ ಲಸಿತ್ ಮಲಿಂಗಾ ಅವರೊಂದಿಗೆ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಸಂಭ್ರಮಿಸಿದ್ದಾರೆ.
ಇದಕ್ಕೆ ಕಾರಣ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಲಸಿತ್ ಮಲಿಂಗಾ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಮೂಲಕ 300ನೇ ಪಡೆದ ಸಾಧನೆ ಮಾಡಿದರು. ಈ ಖುಷಿಯನ್ನು ಸಂಭ್ರಮಿಸಲು ರೋಹಿತ್ ಶರ್ಮಾ ಮಲಿಂಗಾ ಅವರನ್ನು ತಬ್ಬಿಕೊಂಡು ಅಭಿನಂದನೆ ಸಲ್ಲಿಸಿದರು.
ಲಂಕಾದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಸಿತ್ ಮಲಿಂಗಾ ಅವರು 300ನೇ ವಿಕೆಟ್ ಕಿತ್ತು ಸಂಭ್ರಮಿಸಿದರು. ಇನ್ನು ಶ್ರೀಲಂಕಾ ತಂಡದಲ್ಲಿ 300 ವಿಕೆಟ್ ಪಡೆದ ಸಾಧನೆ ಮಾಡಿದ ಆಟಗಾರರಲ್ಲಿ ಮಲಿಂಗಾ ನಾಲ್ಕನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಲಸಿತ್ ಮಲಿಂಗಾ 203 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 300 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 38 ರನ್ ಗಳಿಗೆ 6 ವಿಕೆಟ್ ಪಡೆದಿರುವುದು ಶ್ರೇಷ್ಠ ಸಾಧನೆ ಮಾಡಿದ್ದಾರೆ.
ಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 376 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡವನ್ನು ಟೀಂ ಇಂಡಿಯಾ 207 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 168 ರನ್ ಗಳಿಂದ ಭರ್ಜರಿ ಜಯ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿRohit Sharmaರೋಹಿತ್ ಶರ್ಮಾLasith Malingaಲಸಿತ್ ಮಲಿಂಗಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


