ವಿಕೆಟ್ ಹಿಂದೆ ತಾವೇ 'ಮಾಸ್ಟರ್' ಎಂಬುದನ್ನು ಮತ್ತೆ ಸಾಬೀತು ಪಡಿಸಿದ ಧೋನಿ!
ಸ್ಟಂಪಿಂಗ್ ಮೂಲಕ ಈಗಾಗಲೇ ವಿಶ್ವದಾಖಲೆ ನಿರ್ಮಾಣ ಮಾಡಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ತಾವು ವಿಕೆಟ್ ಹಿಂದಿನ ಮಾಸ್ಟರ್ ಎಂಬುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ.

Published On :
ಕೊಲಂಬೋ: ಸ್ಟಂಪಿಂಗ್ ಮೂಲಕ ಈಗಾಗಲೇ ವಿಶ್ವದಾಖಲೆ ನಿರ್ಮಾಣ ಮಾಡಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ತಾವು ವಿಕೆಟ್ ಹಿಂದಿನ ಮಾಸ್ಟರ್ ಎಂಬುದನ್ನು ಮತ್ತೆ ಸಾಬೀತು ಪಡಿಸಿದ್ದಾರೆ.
ಶ್ರೀಲಂಕಾ ವಿರುದ್ಧ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಏಕೈಕ ಟಿ20 ಪಂದ್ಯದಲ್ಲಿ ಧೋನಿ ಶ್ರೀಲಂಕಾದ ಏಂಜಲೋ ಮ್ಯಾಥ್ಯೂಸ್ ಅವರನ್ನು ಅಚ್ಚರಿಯ ಸ್ಟಂಪಿಂಗ್ ಮೂಲಕ ಔಟ್ ಮಾಡಿದ್ದಾರೆ. ಪಂದ್ಯದ ಏಳನೇ ಓವರ್ ನಲ್ಲಿ ಭಾರತದ ಚಾಹಲ್ ಬೌಲ್ ಮಾಡುತ್ತಿದ್ದರು. 7ನೇ ಓವರ್ ನ ಮೂರನೇ ಎಸೆತದಲ್ಲಿ ಚಾಹಲ್ ಎಸೆದ ಚೆಂಡು ತಿರುವು ಪಡೆಯುತ್ತಿದ್ದಂತೆಯೇ ಮ್ಯಾಥ್ಯೂಸ್ ಫ್ರಂಟ್ ಫುಟ್ ಮೂಲಕ ಅದನ್ನು ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ್ದಾರೆ. ಈ ವೇಳೆ ಚೆಂಡು ಅವರ ಬ್ಯಾಟ್ ಅನ್ನು ವಂಚಿಸಿ ಔಟ್ ಸೈಡ್ ಎಡ್ಜ್ ನಿಂದ ಆಚೆಗೆ ಹೋಗಿ ವಿಕೆಟ್ ಹಿಂದಿದ್ದ ಧೋನಿ ಕೈ ಸೇರಿತ್ತು.
ಚೆಂಡನ್ನು ಹಿಡಿತಕ್ಕೆ ಪಡೆದ ಧೋನಿ ತತ್ ಕ್ಷಣವೇ ಬೇಲ್ಸ್ ಎಗರಿಸಿದ್ದರು, ಆಗ ಔಟ್ ಗಾಗಿ ಅಂಪೈರ್ ಬಳಿ ಮನವಿ ಮಾಡಲಾಯಿತು. ಮೇಲ್ನೋಟಕ್ಕೆ ಮ್ಯಾಥ್ಯೂಸ್ ನಾಟ್ ಔಟ್ ಎಂದು ತಿಳಿಯುತ್ತಿತ್ತಾದರೂ, ಮೂರನೇ ಆಂಪೈರ್ ಕ್ಯಾಮೆರಾ ಮೂಲಕ ಸೂಕ್ಷ್ಮವಾಗಿ ಗಮನಿಸಿದಾಗ ಮ್ಯಾಥ್ಯೂಸ್ ಬಲಗಾಲು ಕೊಂಚ ಗೆರೆ ದಾಟಿತ್ತು. ಸುಮಾರು ಹೊತ್ತಿನ ಪರೀಕ್ಷೆ ಬಳಿಕ ಮೂರನೇ ಅಂಪೈರ್ ಇದನ್ನು ಔಟ್ ಎಂದು ತೀರ್ಪು ನೀಡಿದರು. ಈ ತೀರ್ಪಿನಿಂದ ಮ್ಯೂಥ್ಯಾಸ್ ಅಚ್ಚರಿಯಲ್ಲೇ ಪೆವಿಲಿಯನ್ ಗೆ ವಾಪಸ್ ಆದರು. ಇದು ಧೋನಿ ಅವರ 101ನೇ ಸ್ಟಂಪಿಂಗ್ ಆಗಿದೆ.
ಈ ಹಿಂದೆ 100 ಸ್ಟಂಪಿಂಗ್ ಮಾಡುವ ಮೂಲಕ ಶ್ರೀಲಂಕಾದ ಕುಮಾರ ಸಂಗಕ್ಕಾರ ಅವರ ಹೆಸರಿಲ್ಲಿದ್ದ ದಾಖಲೆಯನ್ನು ಧೋನಿ ಮುರಿದಿದ್ದು, ಇದೀಗ ತಮ್ಮದೇ ದಾಖಲೆಯನ್ನು ಮತ್ತಷ್ಟು ಉತ್ತಮಗೊಳಿಸಿಕೊಂಡಿದ್ದಾರೆ.
ಈ ಮೂಲಕ ಮಹೇಂದ್ರ ಸಿಂಗ್ ಧೋನಿ ತಾವು ವಿಕೆಟ್ ಹಿಂದಿನ ಚಾಣಾಕ್ಷ ಎಂಬುದನ್ನು ಮತ್ತೆ ಸಾಬೀತು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಶ್ರೀಲಂಕಾVirat Kohliವಿರಾಟ್ ಕೊಹ್ಲಿSrilankaColomboಕೊಲಂಬೋT20ಟಿ20Cricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


