ಕ್ರಿಕೆಟ್

ಇಲ್ಲಿಗೆ ಕೊನೆಯಾಗಲಿದಿಯ ಯುವಿ ಕ್ರಿಕೆಟ್ ಬದುಕು?

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಏಕದಿನ ವಿಶ್ವಕಪ್ ಮತ್ತು ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. ಅಂತಹ ಯುವಿ...

ಇಲ್ಲಿಗೆ ಕೊನೆಯಾಗಲಿದಿಯ ಯುವಿ ಕ್ರಿಕೆಟ್ ಬದುಕು?
ಯುವರಾಜ್ ಸಿಂಗ್
Published On :
ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಏಕದಿನ ವಿಶ್ವಕಪ್ ಮತ್ತು ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. ಅಂತಹ ಯುವಿ ಬದುಕು ಇದೀಗ ಅಂತ್ಯದೆಡೆಗೆ ಸಾಗುತ್ತಿದ್ದೀಯ ಎಂಬ ಅನುಮಾನ ದಟ್ಟವಾಗತೊಡಗಿದೆ. 
ಅದಕ್ಕೆ ಇಂಬು ಕೊಡುವಂತಾ ಘಟನೆ ನಡೆದಿದ್ದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯಕ್ಕಾಗಿ 14 ಮಂದಿ ಆಟಗಾರರ ಅಧ್ಯಕ್ಷರ ಇಲೆವೆನ್ ತಂಡವನ್ನು ಆಯ್ಕೆ ಮಾಡಿತ್ತು. 
ಈ ತಂಡಕ್ಕಾಗಿ ಬಿಸಿಸಿಐ ಅಗ್ರ 74 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು ಈ ಪಟ್ಟಿಯಲ್ಲಿ ಸ್ಥಾನ ಪಡೆಯಲು ಯುವರಾಜ್ ಸಿಂಗ್ ವಿಫಲರಾಗಿದ್ದಾರೆ. ಹೀಗಾಗಿ ಯುವಿ ಅಂತಾರಾಷ್ಟ್ರೀಯ ಕ್ರಿಕೆಟ್ ಮುಗಿಯುವ ಸಾಧ್ಯತೆಗಳು ದಟ್ಟವಾಗತೊಡಗಿವೆ. 
ಹಿರಿಯ ಆಟಗಾರರ ಆಯ್ಕೆ ಕುರಿತಂತೆ ಬಿಸಿಸಿಐನಲ್ಲಿ ಕೆಲ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಕೊಟ್ಟ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳದ ಆಟಗಾರರನ್ನು ನಿರ್ದಾಕ್ಷಿಣ್ಯವಾಗಿ ತಂಡದಿಂದ ಕೈಬಿಡಲಾಗುತ್ತಿದ್ದು ಮುಂಬರುವ 2019ರ ವಿಶ್ವಕಪ್ ನಲ್ಲಿ ಯುವಿ ಆಡುವುದು ಅನುಮಾನವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.