ಕ್ರಿಕೆಟ್

ಭಾರತ ಪ್ರವಾಸ ಕಠಿಣವಾಗಿರಲಿದೆ, ಉತ್ಸಾಹದಿಂದ ಕಣಕ್ಕಿಳಿಯಲಿದ್ದೇವೆ: ಆಸಿಸ್ ನಾಯಕ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾ ತಂಡದ ಹಾಲಿ ಭಾರತ ಪ್ರವಾಸ ಕಠಿಣವಾಗಿರಲಿದ್ದು, ನಾವು ಉತ್ತಮ ಕ್ರಿಕೆಟ್ ಆಡಲು ಪ್ರಾಮುಖ್ಯತೆ ನೀಡುತ್ತೇವೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹೇಳಿದ್ದಾರೆ.

ಭಾರತ ಪ್ರವಾಸ ಕಠಿಣವಾಗಿರಲಿದೆ, ಉತ್ಸಾಹದಿಂದ ಕಣಕ್ಕಿಳಿಯಲಿದ್ದೇವೆ: ಆಸಿಸ್ ನಾಯಕ ಸ್ಟೀವ್ ಸ್ಮಿತ್
ಆಸಿಸ್ ತಂಡದ ನಾಯಕ ಸ್ಟೀವ್ ಸ್ಮಿತ್
Published On :
ನವದೆಹಲಿ: ಆಸ್ಟ್ರೇಲಿಯಾ ತಂಡದ ಹಾಲಿ ಭಾರತ ಪ್ರವಾಸ ಕಠಿಣವಾಗಿರಲಿದ್ದು, ನಾವು ಉತ್ತಮ ಕ್ರಿಕೆಟ್ ಆಡಲು ಪ್ರಾಮುಖ್ಯತೆ ನೀಡುತ್ತೇವೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹೇಳಿದ್ದಾರೆ.
ಇದೇ ಸೆಪ್ಟೆಂಬರ್ 17ರಿಂದ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವೆ ಐದು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಬಳಿಕ ಅಕ್ಟೋಬರ್ 7ರಿಂದ 3 ಟಿ20 ಪಂದ್ಯಗಳ ಸರಣಿ ಆರಭವಾಗಲಿದೆ. ಈಗಾಗಲೇ ಈ ಎರಡು  ಸರಣಿಗಳ ನಿಮಿತ್ತ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಆಗಮಿಸಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಮಾತನಾಡಿದ್ದಾರೆ.
"ಆಸ್ಟ್ರೇಲಿಯಾ ತಂಡ ದೇಶೀಯ ಸರಣಿಗಳಲ್ಲಿ ಹಾಗೂ ವಿದೇಶಗಳಲ್ಲಿ ನಡೆಯುವ ಸರಣಿಗಳಲ್ಲಿ ಉತ್ತಮವಾಗಿದೆಯಾದರೂ, ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಎರಡು ಸರಣಿಗಳು ನಮ್ಮ ತಂಡಕ್ಕೆ ಕಠಿಣವಾಗಿರಲಿವೆ. ಭಾರತ  ತಂಡ ಶ್ರೀಲಂಕಾ ವಿರುದ್ಧದ ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ವೈಟ್ ವಾಶ್ ಸಾಧನೆ ಮಾಡಿದ ಹುಮ್ಮಸ್ಸಿನಲ್ಲಿದ್ದು, ಇದೇ ರೀತಿಯ ಪ್ರದರ್ಶನ ಆಸಿಸ್ ತಂಡದ ವಿರುದ್ಧವೂ ನೀಡುವ ವಿಶ್ವಾಸದಲ್ಲಿದೆ. ಹೀಗಾಗಿ ಭಾರತ  ತಂಡ ಅಷ್ಟು ಸುಲಭವಾಗಿ ಆಸ್ಟ್ರೇಲಿಯಾ ತಂಡಕ್ಕೆ ಮಣಿಯುವುದಿಲ್ಲ. ನಾವು ಕಠಿಣ ಹೋರಾಟ ಮಾಡದ ಹೊರತು ಭಾರತ ತಂಡವನ್ನು ಮಣಿಸಲು ಸಾಧ್ಯವಿಲ್ಲ ಎಂದು ಸ್ಮಿತ್ ಹೇಳಿದ್ದಾರೆ.
ಅಂತೆಯೇ ತಮ್ಮ ತಂಡದ ಆಟಗಾರರ ಪ್ರದರ್ಶನದ ಕುರಿತು ಸಕಾರಾತ್ಮಕವಾಗಿರುವ ಸ್ಮಿತ್, ಭಾರತದ ಪಿಚ್ ಗಳು ಸ್ಪಿನ್ನರ್ ಗಳಿಗೆ ನೆರವಾಗುತ್ತದೆ. ಹೀಗಾಗಿ ತಂಡದಲ್ಲಿ ಮೂವರು ಸ್ಪಿನ್ನರ್ ಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ತಂಡದ ಬ್ಯಾಟಿಂಗ್ ಉತ್ತಮವಾಗಿದ್ದು, ಫೀಲ್ಡಿಂಗ್ ಕೂಡ ಸುಧಾರಿಸಿದೆ. ಅಂತೆಯೇ ಭಾರತದ ಸ್ಪಿನ್ನರ್ ಗಳನ್ನು ಎದುರಿಸುಲು ನಾವೂ ಕೂಡ ಸಜ್ಜಾಗಿದ್ದು, ಭಾರತದ ಅಕ್ಸರ್ ಪಟೇಲ್ ಹಾಗೂ ಯಜುವೇಂದ್ರ ಚಾಹಲ್ ಉತ್ತಮ  ಫಾರ್ಮ ನಲ್ಲಿದ್ದಾರೆ. ಕುಲದೀಪ್ ಯಾದವ್ ಕೂಡ ವಿಕೆಟ್ ಪಡೆಯುವ ಬೌಲರ್ ಆಗಿದ್ದು, ಇವರನ್ನು ಎದುರಿಸಲು ಯೋಜನೆ ರೂಪಿಸಲಾಗಿದೆ ಎಂದು ಸ್ಮಿತ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.