ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ 3 ಏಕದಿನ ಪಂದ್ಯಕ್ಕೆ 4 ಆರ್‌ಸಿಬಿ ಆಟಗಾರರು: ಟ್ವಿಟ್ಟರ್ ನಲ್ಲಿ ಟ್ರೋಲ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದು...

ಆಸ್ಟ್ರೇಲಿಯಾ ವಿರುದ್ಧದ 3 ಏಕದಿನ ಪಂದ್ಯಕ್ಕೆ 4 ಆರ್‌ಸಿಬಿ ಆಟಗಾರರು: ಟ್ವಿಟ್ಟರ್ ನಲ್ಲಿ ಟ್ರೋಲ್
ಆರ್‌ಸಿಬಿ ಆಟಗಾರರು
Published On :
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದು ಇದಕ್ಕೆ ಟ್ವೀಟರ್ ನಲ್ಲಿ ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಯಜುವೇಂದ್ರ ಚಹಾಲ್, ಕೆಎಲ್ ರಾಹುಲ್ ಹಾಗೂ ಕೇದಾರ್ ಜಾಧವ್ ಟೀಂ ಇಂಡಿಯಾದ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿರುವುದು ಕ್ರೀಡಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. 
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಆಯ್ಕೆ ಸಮಿತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕ್ರೀಡಾಭಿಮಾನಿಗಳು ಹಿರಿಯ ಹಾಗೂ ಅನುಭವಿ ಆಟಗಾರರಾದ ಯುವರಾಜ್ ಸಿಂಗ್ ಹಾಗೂ ಸುರೇಶ್ ರೈನಾರನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ. 
ಇದೊಂದು ಆರ್‌ಸಿಬಿ ಕೋಟಾ ಎಂಬ ಹೆಸರು ನೀಡಿರುವ ಕ್ರೀಡಾಭಿಮಾನಿಗಳು ಟ್ವೀಟರ್ ನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಹಿಂದೆ ಮಹೇಂದ್ರ ಸಿಂಗ್ ಧೋನಿ ನಾಯಕನಾಗಿ ಚೆನ್ನೈ ತಂಡದ ಪರ ಆಡುತ್ತಿದ್ದ ವೇಳೆ ಆರ್ ಅಶ್ವಿನ್, ರವೀಂದ್ರ ಜಡೇಜಾ, ಸುರೇಶ್ ರೈನಾ ತಂಡದ ಕಾಯಂ ಸದಸ್ಯರಾಗಿದ್ದಾಗಲೂ ಇಂತಹ ಮಾತುಗಳು ಕೇಳಿ ಬಂದಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.