ಲಂಕಾ ನಂತರ ಆಸ್ಟ್ರೇಲಿಯಾ ವಿರುದ್ಧದ ಮೊದಲ 3 ಪಂದ್ಯಗಳಿಗೂ ಶಿಖರ್ ಧವನ್ ಅಲಭ್ಯ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೂ ಮಿಸ್ ಆಗಲಿದ್ದಾರೆ...

Published On :
ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಏಕದಿನ ಪಂದ್ಯಗಳಿಗೂ ಮಿಸ್ ಆಗಲಿದ್ದಾರೆ.
ಶಿಖರ್ ಧವನ್ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಿಗೆ ಶಿಖರ್ ಧವನ್ ಅಲಭ್ಯರಾಗಲಿದ್ದಾರೆ. ಇನ್ನು ಧವನ್ ಗೆ ಬದಲಾಗಿ ಯಾವುದೇ ಆಟಗಾರನ ಹೆಸರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಘೋಷಿಸಿಲ್ಲ.
ಈ ಹಿಂದೆ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಖರ್ ಧವನ್ ಶ್ರೀಲಂಕಾ ವಿರುದ್ಧದ ಐದನೇ ಏಕದಿನ ಪಂದ್ಯ ಮತ್ತು ಏಕೈಕ ಟಿ20 ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಮತ್ತೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮಿಸ್ ಆಗಲಿದ್ದಾರೆ.
ಭರ್ಜರಿ ಫಾರ್ಮ್ ನಲ್ಲಿರುವ ಶಿಖರ್ ಧವನ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದರು. ಆದರೆ ಅವಲ ಅಲಭ್ಯತೆ ತಂಡಕ್ಕೆ ಕೊಂಚ ಹಿನ್ನಡೆ ಉಂಟು ಮಾಡಲಿದೆ. ಇನ್ನು ಶಿಖರ್ ಧವನ್ ಗೆ ಬದಲಾಗಿ ಅಜಿಂಕ್ಯ ರಹಾನೆ ರೋಹಿತ್ ಶರ್ಮಾ ಜತೆ ಸೇರಿ ಇನ್ನಿಂಗ್ ಆರಂಭಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


