'ಭಾರತ ಗೆಲ್ಲಲು ಮಳೆ ಬರಬೇಕಾಯಿತು': ಡೀನ್ ಜೋನ್ಸ್ ಟ್ವೀಟ್ ಗೆ ಅಭಿಮಾನಿಗಳ ತರಾಟೆ
ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ಫಲಿತಾಂಶದ ಕುರಿತಂತೆ ಆಸಿಸ್ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಮಾಡಿರುವ ಒಂದು ಟ್ವೀಟ್ ಇದೀಗ ಭಾರತ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

Published On :
ಚೆನ್ನೈ: ತೀವ್ರ ಕುತೂಹಲ ಕೆರಳಿಸಿದ್ದ ಭಾರತ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ಫಲಿತಾಂಶದ ಕುರಿತಂತೆ ಆಸಿಸ್ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಮಾಡಿರುವ ಒಂದು ಟ್ವೀಟ್ ಇದೀಗ ಭಾರತ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
ನಿನ್ನೆ ಚೆನ್ನೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾಗೆ ಗೆಲ್ಲಲು 281 ರನ್ ಗಳ ಗುರಿ ನೀಡಿತ್ತು. ಆದರೆ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಮಾಡುವ ವೇಳೆ ದಿಢೀರ್ ಸುರಿದ ಮಳೆ ಪಂದ್ಯಕ್ಕೆ ಅಡ್ಡಿ ಪಡಿಸಿತು. ಹೀಗಾಗಿ ಅಂಪೈರ್ ಗಳು ಡಕ್ವರ್ಥ್ ನಿಯಮದಡಿ ಆಸ್ಟ್ರೇಲಿಯಾಗೆ ಗೆಲ್ಲಲು 21 ಓವರ್ ಗಳಲ್ಲಿ 165 ರನ್ ಗಳ ಗುರಿ ನೀಡಿದರು. ಈ ಮೊತ್ತವನ್ನು ಮುಟ್ಟುವಲ್ಲಿ ವಿಫಲವಾದ ಸ್ಟೀವ್ ಸ್ಮಿತ್ ಪಡೆ ಭಾರತದ ಎದುರು 29 ರನ್ ಗಳ ಅಂತರದಿಂದ ಸೋಲಿಗೆ ಶರಣಾಯಿತು.
ಪಂದ್ಯದ ಫಲಿತಾಂಶದ ಕುರಿತಂತೆ ಟ್ವಿಟರ್ ನಲ್ಲಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದ ಮಾಜಿ ಆಟಗಾರ ಡೀನ್ ಜೋನ್ಸ್, ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲ್ಲಲು ಮಳೆಯೇ ಬರಬೇಕಾಯಿತು ಎಂದು ಟ್ವೀಟ್ ಮಾಡುವ ಮೂಲಕ ಭಾರತದ ಗೆಲುವಿಗೆ ಮಳೆ ಕಾರಣ ಎಂದು ಟ್ವೀಟ್ ಮಾಡಿದ್ದರು. ಡೀನ್ ಜೋನ್ಸ್ ಅವರ ಟ್ವೀಟ್ ಗೆ ಕೆಂಗಣ್ಣು ಬೀರಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅವರದೇ ಧಾಟಿಯಲ್ಲಿ ತಿರುಗೇಟು ನೀಡಿದ್ದು, ಕ್ರಿಕೆಟ್ ನಿಯಮಾವಳಿ ತಿಳಿಯದ ನೀವು ಕೂಡ ಕ್ರಿಕೆಟಿಗರೇ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಡೀನ್ ಜೋನ್ಸ್ ಟ್ವೀಟ್ ಮತ್ತು ಅದಕ್ಕೆ ಬಂದ ಪ್ರತಿಕ್ರಿಯೆಯ ಟ್ವೀಟ್ ಗಳ ಸರಣಿ ಇಲ್ಲಿದೆ.

Another brain fade moment for another Australian
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Twitterಟ್ವಿಟರ್Chennaiಚೆನ್ನೈIndia vs Australiaಭಾರತ ವರ್ಸಸ್ ಆಸ್ಟ್ರೇಲಿಯಾCricket Offbeatಕ್ರಿಕೆಟ್ ಸ್ವಾರಸ್ಯDean Jonesಡೀನ್ ಜೋನ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.