ಶ್ರೀಶಾಂತ್ ಆಜೀವ ನಿಷೇಧ: ಕೇರಳ ಹೈಕೋರ್ಟ್‌ಗೆ ಬಿಸಿಸಿಐ ಮೇಲ್ಮನವಿ
ಸ್ಪಾಟ್ ಫಿಕ್ಸಿಂಗ್ ಆರೋಪ ಸಂಬಂಧ ಆಜೀವ ನಿಷೇಧಕ್ಕೆ ಗುರಿಯಾಗಿದ್ದ ವೇಗಿ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಿದ್ದ ಕೇರಳ ಹೈಕೋರ್ಟ್ ನಲ್ಲಿ...

Published On :
ಕೊಚ್ಚಿ: ಸ್ಪಾಟ್ ಫಿಕ್ಸಿಂಗ್ ಆರೋಪ ಸಂಬಂಧ ಆಜೀವ ನಿಷೇಧಕ್ಕೆ ಗುರಿಯಾಗಿದ್ದ ವೇಗಿ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ತೆರವುಗೊಳಿಸಿದ್ದ ಕೇರಳ ಹೈಕೋರ್ಟ್ ನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಬಿಸಿಸಿಐ ಹೇರಿದ್ದ ಆಜೀವ ನಿಷೇಧವನ್ನು ತೆರವುಗೊಳಿಸಬೇಕು ಎಂದು ಕೋರಿ ಶ್ರೀಶಾಂತ್ ಕೇರಳ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ ಕ್ರಿಕೆಟ್ ಆಡಲು ಶ್ರೀಶಾಂತ್ ಗೆ ಅವಕಾಶ ನೀಡಬೇಕು ಎಂದು ಸೂಚಿಸಿತ್ತು.
ಕೇರಳ ಹೈಕೋರ್ಟ್ ನ ಈ ಆದೇಶ ಹಿನ್ನೆಲೆಯಲ್ಲಿ ಬಿಸಿಸಿಐ ಮೇಲ್ಮನವಿ ಅರ್ಜಿ ಸಲ್ಲಿಸಿದೆ. 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿ ಶ್ರೀಶಾಂತ್ ಬಿಸಿಸಿಐನಿಂದ ಅಜೀವ ನಿಷೇಧಕ್ಕೆ ಒಳಗಾಗಿದ್ದರು. ಪ್ರಕರಣ ಸಂಬಂಧ ಸಾಕ್ಷ್ಯಾಧಾರದ ಕೊರತೆಯಿಂದಾಗಿ 2015ರಲ್ಲಿ ದೆಹಲಿ ನ್ಯಾಯಾಲಯ ಶ್ರೀಶಾಂತ್ ರನ್ನು ದೋಷಮುಕ್ತಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್BCCIಬಿಸಿಸಿಐIPLKerala High CourtSreesanthಶ್ರೀಶಾಂತ್spot-fixingಸ್ಪಾಟ್ ಫಿಕ್ಸಿಂಗ್ಐಪಿಎಲ್ಕೇರಳ ಹೈಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


