2019ರ ವಿಶ್ವಕಪ್ಗೆ ನೇರ ಅರ್ಹತೆ ಕಳೆದುಕೊಂಡ ವಿಂಡೀಸ್, ಅರ್ಹತೆ ಪಡೆದ ಶ್ರೀಲಂಕಾ
ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯ ಸೋಲುವ ಮೂಲಕ ವೆಸ್ಟ್ ಇಂಡೀಸ್ 2019ರ ಐಸಿಸಿ ಏಕದಿನ ವಿಶ್ವಕಪ್ ಗೆ ನೇರ ಅರ್ಹತೆಯನ್ನು ಕಳೆದುಕೊಂಡಿದೆ...

Published On :
ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯ ಸೋಲುವ ಮೂಲಕ ವೆಸ್ಟ್ ಇಂಡೀಸ್ 2019ರ ಐಸಿಸಿ ಏಕದಿನ ವಿಶ್ವಕಪ್ ಗೆ ನೇರ ಅರ್ಹತೆಯನ್ನು ಕಳೆದುಕೊಂಡಿದೆ.
ಇಂಗ್ಲೆಂಡ್ ವಿರುದ್ಧ ಐದು ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ 5 ಪಂದ್ಯಗಳನ್ನು ಗೆಲ್ಲಬೇಕಿತ್ತು. ಆದರೆ ಮೊದಲ ಪಂದ್ಯದಲ್ಲೇ ಸೋಲು ಕಂಡಿದ್ದು ನೇರವಾಗಿ ಅರ್ಹತೆಯನ್ನು ಕಳೆದುಕೊಂಡಿದೆ. ಹೀಗಾಗಿ ಶ್ರೀಲಂಕಾ ಇದೀಗ ವಿಶ್ವಕಪ್ ಗೆ ನೇರ ಅರ್ಹತೆ ಪಡೆದ ಎಂಟನೇ ತಂಡವಾಗಿದೆ.
ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ 42 ಓವರ್ ಗಳಿಗೆ ಸಿಮೀತಗೊಳಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 9 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತ್ತು. 205 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 31ನೇ ಓವರ್ ನಲ್ಲೇ 3 ವಿಕೆಟ್ ನಷ್ಟಕ್ಕೆ 210 ರನ್ ಸಿಡಿಸುವ ಮೂಲಕ 7 ವಿಕೆಟ್ ಗಳಿಂದ ಜಯ ಗಳಿಸಿತು.
ವಿಶ್ವಕಪ್ ಪಂದ್ಯಾವಳಿಗೆ ನೇರ ಅರ್ಹತೆ ಪಡೆಯಲು ಸೆಪ್ಟೆಂಬರ್ 30ರೊಳಗೆ ತಂಡವೊಂದು 78 ಅಂಕಗಳನ್ನು ಸಂಪಾದಿಸಬೇಕಿತ್ತು. ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಸೋಲು ಕಂಡಿದ್ದರಿಂದ ಲಂಕಾ ನೇರ ಅರ್ಹತೆ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


