ಆಸೀಸ್ ನಾಯಕ ಸ್ಮಿತ್ ಕನಸಿನ ತಂಡದಲ್ಲಿ ಕೊಹ್ಲಿಗಿಲ್ಲ ಸ್ಥಾನ!
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರ ಕನಸಿನ ತಂಡವನ್ನು ರೂಪಿಸಿದ್ದು ಅದರಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಸ್ಥಾನ ನೀಡದೆ...

Published On :
ಕೋಲ್ಕತ್ತಾ: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರ ಕನಸಿನ ತಂಡವನ್ನು ರೂಪಿಸಿದ್ದು ಅದರಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೆ ಸ್ಥಾನ ನೀಡದೆ ಇರುವುದು ಅಚ್ಚರಿಗೆ ಕಾರಣವಾಗಿದೆ.
ಇನ್ನು ಕನಸಿನ ತಂಡದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಹಾಗೂ ಹರ್ಭಜನ್ ಸಿಂಗ್ ಸ್ಥಾನ ಪಡೆದಿದ್ದು ಪ್ರಸ್ತುತ ಉತ್ತಮ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಸ್ಥಾನ ವಂಚಿತರಾಗಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಸ್ಮಿತ್ ನನ್ನ ಹಾಗೂ ವಿರಾಟ್ ಕೊಹ್ಲಿ ನಡುವೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಆಟಗಾರ ಮತ್ತು ನಾಯಕನಾಗಿ ಕೊಹ್ಲಿ ಅದ್ಭುತ. ಅಲ್ಲದೇ ಯಾವುದೇ ಆಟಗಾರರೊಂದಿಗೆ ವೈರತ್ವ ಸಾಧಿಸುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಭಾರತ ಪ್ರವಾಸ ಕೈಗೊಂಡಿತ್ತು. ಈ ಸರಣಿ ವೇಳೆ ಆಸೀಸ್ ನಾಯಕ ಹಾಗೂ ವಿರಾಟ್ ಕೊಹ್ಲಿ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaVirat Kohliವಿರಾಟ್ ಕೊಹ್ಲಿSteve Smithಸ್ಟೀವ್ ಸ್ಮಿತ್Dream Teamಕನಸಿನ ತಂಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


