ಬೌಂಡರಿಯಲ್ಲಿ ಮನೀಶ್ ಪಾಂಡೆ ಸೂಪರ್ ಕ್ಯಾಚ್
ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರ ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿದಿದ್ದಾರೆ...

Published On :
ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರ ಮನೀಶ್ ಪಾಂಡೆ ಅದ್ಭುತ ಕ್ಯಾಚ್ ಹಿಡಿದಿದ್ದಾರೆ.
ಇಂದೋರ್ ನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮನೀಶ್ ಪಾಂಡೆ ಸಿಕ್ಸ್ ಹೋಗುತ್ತಿದ್ದ ಬಾಲ್ ಅನ್ನು ಹಿಡಿದು ಆಯಾ ತಪ್ಪಿ ಬೌಂಡರಿಗೆ ಬೀಳುವಾಗ ಚೆಂಡನ್ನು ಮೇಲಕ್ಕೆ ಎಸೆದು ನಂತರ ಬೌಂಡರಿ ಲೈನ್ ನಿಂದ ಮೈದಾನಕ್ಕೆ ಬಂದು ಕ್ಯಾಚ್ ಅನ್ನು ಹಿಡಿದಿದ್ದಾರೆ.
48ನೇ ಓವರ್ ಅನ್ನು ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬೂಮ್ರಾ ಮಾಡುತ್ತಿದ್ದರು. ಓವರ್ ನ 5ನೇ ಎಸೆತದಲ್ಲಿ ಆಸ್ಟ್ರೇಲಿಯಾದ ಆಟಗಾರ ಹ್ಯಾಂಡ್ಸ್ ಕ್ಯೂಬ್ ಚೆಂಡನ್ನು ಸಿಕ್ಸರ್ ಗೆ ಸಿಡಿಸಿದರು. ಆಗ ಬೌಂಡರಿಯಲ್ಲಿ ನಿಂತಿದ್ದ ಮನೀಶ್ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 293 ರನ್ ಗಳನ್ನು ಪೇರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaIndoreಇಂದೋರ್ಏಕದಿನ ಪಂದ್ಯODIManish Pandeyಮನೀಶ್ ಪಾಂಡೆಕ್ರಿಕೆಟ್ ಸ್ವಾರಸ್ಯCricket Off beat
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


