ಕ್ರಿಕೆಟ್

ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಬಂಧನ

ಇಂಗ್ಲೆಂಡ್ ಟೆಸ್ಟ್ ತಂಡದ ಉಪ ನಾಯಕ ಬೆನ್ ಸ್ಟೋಕ್ಸ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಬಂಧನ
ಬೆನ್ ಸ್ಟೋಕ್ಸ್
Published On :
ಲಂಡನ್: ಇಂಗ್ಲೆಂಡ್ ಟೆಸ್ಟ್ ತಂಡದ ಉಪ ನಾಯಕ ಬೆನ್ ಸ್ಟೋಕ್ಸ್ ರನ್ನು ಪೊಲೀಸರು ಬಂಧಿಸಿದ್ದಾರೆ. 
ಬ್ರಿಸ್ಟಾಲ್ ನಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಪಟ್ಟಂತೆ ಬೆನ್ ಸ್ಟೋಕ್ಸ್ ರನ್ನು ಪೊಲೀಸರು ಸೋಮವಾರ ಬೆಳಗ್ಗೆ ಬಂಧಿಸಿದ್ದು ನಂತರ ವಿಚಾರಣೆಯ ಮೇರೆಗೆ ಬಿಡುಗಡೆಗೊಳಿಸಿದ್ದಾರೆ. ಬೆನ್ ಸ್ಟೋಕ್ಸ್ ಬಂಧನ ಹಿನ್ನಲೆ ವೆಸ್ಟ್ ಇಂಡೀಸ್ ವಿರುದ್ಧ ನಾಲ್ಗನೇ ಏಕದಿನ ಪಂದ್ಯದಿಂದ ಅವರನ್ನು ಕೈಬಿಡಲಾಗಿದೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 
ಇನ್ನು ಘಟನೆ ವೇಳೆ ಬೆನ್ ಸ್ಟೋಕ್ಸ್ ಜತೆಗೆ ಸಹ ಆಟಗಾರ ಅಲೆಕ್ಸ್ ಹೇಲ್ಸ್ ಸಹ ಇದ್ದುದ್ದರಿಂದ ಅವರು ವಿಚಾರಣೆಗೆ ಹಾಜರಾಗಬೇಕಿರುವುದರಿಂದ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಿಂದ ಕೈಬಿಡಲಾಗಿದೆ. ಇನ್ನು ನಾಳೆ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸ್ಟೋಕ್ಸ್ ಮತ್ತು ಹೇಲ್ಸ್ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಇಸಿಬಿ ಬದಲಿ ಆಟಗಾರರರನ್ನು ಪ್ರಕಟಿಸಲಿದೆ. 
ಇನ್ನು 26 ವರ್ಷದ ಬೆನ್ ಸ್ಟೋಕ್ಸ್ ಮೇಲೆ ಯಾವುದೇ ದೂರು ದಾಖಲಿಸಿಲ್ಲ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.