ಆಸೀಸ್ ನಾಯಕ ಸ್ಟೀವ್ ಸ್ಮಿತ್ ವಿರುದ್ಧ ರಾಡ್ನೆ ಹಾಗ್ ಗಂಭೀರ ಆರೋಪ
ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ತಮ್ಮ ಸ್ನೇಹಿತರಿಗೆ, ಆಪ್ತರಿಗೆ ಮಾತ್ರ ತಂಡದಲ್ಲಿ ಸ್ಥಾನ ನೀಡುತ್ತಾರೆ ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ರಾಡ್ನೆ ಹಾಗ್...

Published On :
ಮೆಲ್ಬರ್ನ್: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ತಮ್ಮ ಸ್ನೇಹಿತರಿಗೆ, ಆಪ್ತರಿಗೆ ಮಾತ್ರ ತಂಡದಲ್ಲಿ ಸ್ಥಾನ ನೀಡುತ್ತಾರೆ ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ರಾಡ್ನೆ ಹಾಗ್ ಗಂಭೀರ ಆರೋಪ ಮಾಡಿದ್ದಾರೆ.
ಪ್ರತಿಭಾನ್ವಿತ ಆಟಗಾರರಿಗೆ ಸ್ಥಾನ ನೀಡದೇ ತಮ್ಮ ಸ್ನೇಹಿತರಿಗೆ ಹಾಗೂ ಆಪ್ತರಿಗೆ ಮಾತ್ರ ಆದ್ಯತೆ ನೀಡುತ್ತಿರುವುದರಿಂದ ಟೀಂ ಇಂಡಿಯಾ ವಿರುದ್ಧ ಹೀನಾಯ ಸೋಲಿಗೆ ಕಾರಣವಾಗಿದೆ ಎಂದು ರಾಡ್ನೆ ಹಾಗ್ ಸ್ಟೀವ್ ಸ್ಮಿತ್ ವಿರುದ್ಧ ಕಿಡಿಕಾರಿದ್ದಾರೆ.
ಸದ್ಯ ತಂಡದಲ್ಲಿ ಆಸ್ಟನ್ ಅಗರ್, ಕಾರ್ಟ್ ರೈಟ್, ಮ್ಯಾಡಿನ್ಸನ್ ಇವರೆಲ್ಲಾ ಸ್ಮಿತ್ ಅವರ ಆಪ್ತ ಸ್ನೇಹಿತರು. ಇದೇ ಕಾರಣಕ್ಕೆ ಅವರು ಕಳಪೆ ಪ್ರದರ್ಶನ ತೋರಿದರೂ ಅವರನ್ನು ತಂಡದಲ್ಲಿ ಇಟ್ಟುಕೊಳ್ಳಲಾಗಿದೆ ಎಂದು ಹಾಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


