ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಅಬ್ಬರಿಸಿದ ಗೇಯ್ಲ್ 6 ಎಸೆತಗಳಲ್ಲಿ 34 ರನ್!

ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಅಬ್ಬರಿಸಿದ ಗೇಯ್ಲ್ 6 ಎಸೆತಗಳಲ್ಲಿ 34 ರನ್!
ಕ್ರಿಸ್ ಗೇಯ್ಲ್
Published On :
ಸೌತ್ ಹ್ಯಾಂಪ್ಟನ್: ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. 
ಇಂಗ್ಲೆಂಡ್ ನ ವೇಗಿ ಜೇಕ್ ಬಾಲ್ ಬೌಲಿಂಗ್ ನಲ್ಲಿ ಕ್ರಿಸ್ ಗೇಯ್ಲ್ 6 ಎಸೆತಗಳಲ್ಲಿ ಐದು ಸಿಕ್ಸರ್ ಹಾಗೂ 1 ಬೌಂಡರಿ ಸೇರಿದಂತೆ ಬರೋಬ್ಬರಿ 34 ರನ್ ಸಿಡಿಸಿದರು.
29 ಎಸೆತಗಳಲ್ಲಿ 40 ರನ್ ಗಳಿಸಿದ್ದಾಗ ಟಾಮ್ ಕುರಾನ್ ಎಸೆತದಲ್ಲಿ ಪ್ಲುಂಕೆಟ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. 
ಅಂತಾರಾಷ್ಟ್ರೀಯ ಪಂದ್ಯದಲ್ಲಿ 38 ವರ್ಷದ ಗೇಯ್ಲ್ ಬರೋಬ್ಬರಿ 250 ಸಿಕ್ಸರ್ ಸಿಡಿಸುವ ಮೂಲಕ 3ನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಈ ಪಟ್ಟಿಯಲ್ಲಿ ಪಾಕ್ ನ ಶಾಹೀದ್ ಆಫ್ರಿದಿ 351 ಸಿಕ್ಸರ್ ನೊಂದಿಗೆ ಅಗ್ರಸ್ಥಾನದಲ್ಲಿದ್ದರೇ ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸರ್ ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.