ಆಸ್ಟ್ರೇಲಿಯಾ ಮಣಿಸಿ ಮತ್ತೆ ಅಗ್ರ ಸ್ಥಾನಕ್ಕೇರಿದ ಭಾರತ!
5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 7 ವಿಕೆಟ್ ಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಕೈತಪ್ಪಿದ್ದ ಅಗ್ರ ಸ್ಥಾನವನ್ನು ಮರಳಿ ಪಡೆದಿದೆ.

Published On :
ನಾಗಪುರ: 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 7 ವಿಕೆಟ್ ಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಕೈತಪ್ಪಿದ್ದ ಅಗ್ರ ಸ್ಥಾನವನ್ನು ಮರಳಿ ಪಡೆದಿದೆ.
ಈ ಹಿಂದೆ ಬೆಂಗಳೂರಿನಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ಭಾರತ ಸೋತಿದ್ದರಿಂದ ಕೊಹ್ಲಿ ಪಡೆ ಐಸಿಸಿ ರ್ಯಾಂಕಿಂಗ್ ನಲ್ಲಿ ಎರನೇ ಸ್ಥಾನಕ್ಕೆ ಕುಸಿದಿತ್ತು. ಆದರೆ ಇಂದು ನಾಗಪುರದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಕೈತಪ್ಪಿದ್ದ ಅಗ್ರ ಸ್ಥಾನವನ್ನು ಮತ್ತೆ ಪಡೆದಿದೆ. ಈ ಹಿಂದೆ ಅಗ್ರ ಸ್ಥಾನಕ್ಕೇರಿದ್ದ ದಕ್ಷಿಣ ಆಫ್ರಿಕಾ ತಂಡ ಇದೀಗ ಮತ್ತೆ 2ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೆ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಅಂಕಗಳಿಕೆ 120ಕ್ಕೇರಿಕೆಯಾಗಿದ್ದು, 119 ಅಂಕಗಳಿಸಿರುವ ದಕ್ಷಿಣ ಆಫ್ರಿಕಾ ತಂಡ 2ನೇ ಸ್ಥಾನಕ್ಕೆ ಜಾರಿದೆ.
ಅಂತೆಯೇ ಭಾರತದ ವಿರುದ್ಧದ ಏಕದಿನ ಸರಣಿಯನ್ನು 1-4 ಅಂತರದಲ್ಲಿ ಹೀನಾಯವಾಗಿ ಸೋತಿರುವ ಆಸ್ಟ್ರೇಲಿಯಾ ತಂಡ 3ನೇ ಸ್ಥಾನದಲ್ಲಿ ಮುಂದುವರೆದಿದ್ದು, ಸ್ಟೀವ್ ಸ್ಮಿತ್ ಪಡೆ 114 ಅಂಕಗಳನ್ನು ಹೊಂದಿದೆ.
ಅಂತೆಯೇ ಭಾರತದ ವಿರುದ್ಧದ ಏಕದಿನ ಸರಣಿಯನ್ನು 1-4 ಅಂತರದಲ್ಲಿ ಹೀನಾಯವಾಗಿ ಸೋತಿರುವ ಆಸ್ಟ್ರೇಲಿಯಾ ತಂಡ 3ನೇ ಸ್ಥಾನದಲ್ಲಿ ಮುಂದುವರೆದಿದ್ದು, ಸ್ಟೀವ್ ಸ್ಮಿತ್ ಪಡೆ 114 ಅಂಕಗಳನ್ನು ಹೊಂದಿದೆ.
ಭಾರತಕ್ಕೆ ಅಗ್ರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದಿಂದ ಕುತ್ತು
ಇದೇ ವೇಳೆ 2ನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿಯಾಡಲಿದ್ದು, ಆ ಸರಣಿಯನ್ನು ಗೆದ್ದರೆ ಮತ್ತೆ ದಕ್ಷಿಣ ಆಫ್ರಿಕಾ ತಂಡ ಅಗ್ರ ಸ್ಥಾನಕ್ಕೇರುತ್ತದೆ. ಹೀಗಾಗಿ ತನ್ನ ಕೈ ಜಾರುವ ಆಗ್ರ ಸ್ಥಾನ ಮರಳಿ ಪಡೆಯಲು ಭಾರತ ಮುಂಬರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ಏಕದಿನ ಸರಣಿಯನ್ನು ಗೆಲ್ಲಲೇಬೇಕಿದೆ. ಇದೇ ಅಕ್ಟೋಬರ್ 22ರಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿIndia vs AustraliaNagpurನಾಗಪುರICC Rankingsಭಾರತ ವರ್ಸಸ್ ಆಸ್ಟ್ರೇಲಿಯಾCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


