ಐಪಿಎಲ್ ಗೆಲ್ಲಬೇಕೆಂಬ ಆಸೆ ಆರ್ಸಿಬಿ ಅಭಿಮಾನಿಗಳಿಗಿಂತ ನನಗೇ ಹೆಚ್ಚು: ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಅಭಿಮಾನಿಗಳಿಗಿಂತ ಹೆಚ್ಚಾಗಿ ನಾನು ಐಪಿಎಲ್ ಚಾಂಪಿಯನ್ ಆಗಲು ಬಯಸುತ್ತೇನೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ...

Published On :
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಅಭಿಮಾನಿಗಳಿಗಿಂತ ಹೆಚ್ಚಾಗಿ ನಾನು ಐಪಿಎಲ್ ಚಾಂಪಿಯನ್ ಆಗಲು ಬಯಸುತ್ತೇನೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕಳೆದ 10 ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಆವೃತ್ತಿಯಲ್ಲಿ ಒಂದು ಬಾರಿಯೂ ಆರ್ಸಿಬಿ ಟ್ರೋಫಿಯನ್ನು ಗೆದ್ದಿಲ್ಲ. ಅಂತೂ ಮೂರು ಬಾರಿ ಫೈನಲ್ ಪ್ರವೇಶಿಸಿದ್ದರು ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಶೇಕಡ 120ರಷ್ಟು ಭರವಸೆ ನೀಡುತ್ತೇನೆ. ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಈ ಬಾರಿಯ ತಂಡದಲ್ಲಿ ಅತ್ಯುತ್ತಮ ಬ್ಯಾಟ್ಸ್ ಮನ್ ಗಳಿದ್ದಾರೆ. ಅದೇ ರೀತಿ ಬೌಲಿಂಗ್ ನಲ್ಲೂ ಉತ್ತಮ ಲೈನ್ ಅಪ್ ಇದೆ. ಹಲವು ವರ್ಷಗಳಿಂದ ಆರ್ಸಿಬಿ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದೆ. ಅದಕ್ಕೆ ಈ ಬಾರಿಯ ಹರಾಜಿನಲ್ಲಿ ಬೌಲರ್ ಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿತ್ತು ಎಂದರು.
ಆರ್ಸಿಬಿ ತಂಡದಲ್ಲಿ ಯಜುವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಎಂ ಅಶ್ವಿನ್, ಪವನ್ ನೇಗಿ ಮತ್ತು ಇಂಗ್ಲೆಂಡ್ ಆಲ್ರೌಂಡರ್ ಮೊಹೀನ್ ಅಲಿ ಪ್ರಮುಖ ಸ್ಪಿನ್ ಬೌಲರ್ ಗಳು. ಇನ್ನು ವೇಗಿಗಳಾದ ಉಮೇಶ್ ಯಾದವ್, ಕ್ರಿಸ್ ವೋಕ್ಸ್, ನವದೀಪ್ ಶೈನಿ, ಮೊಹಮ್ಮದ್ ಸಿರಾಜ್ ಮತ್ತು ಟೀಮ್ ಸೌಥಿ ಸಹ ತಂಡದಲ್ಲಿದ್ದು ಅವರನ್ನು ಉತ್ತಮವಾಗಿ ಬಳಸಿಕೊಳ್ಳಬಹುದು ಎಂದರು.
ಏಪ್ರಿಲ್ 7ರಿಂದ ಐಪಿಎಲ್ ಮಹಾ ಸಮರ ಶುರುವಾಗಲಿದ್ದು ಇದಕ್ಕಾಗಿ ತಂಡವನ್ನು ಸೇರಿಕೊಂಡಿರುವ ಆರ್ಸಿಬಿ ಆಟಗಾರರು ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಇನ್ನು ಭಾನುವಾರ ಆರ್ಸಿಬಿ ತಂಡ ಕೆಕೆಆರ್ ತಂಡವನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruVirat Kohliವಿರಾಟ್ ಕೊಹ್ಲಿRoyal Challengers Bangaloreರಾಯಲ್ ಚಾಲೆಂಜರ್ಸ್ ಬೆಂಗಳೂರುIPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


