ಕೆಲವೇ ವರ್ಷಗಳಲ್ಲಿ ಐಪಿಎಲ್ ಹಿಂದಿಕ್ಕಲಿದೆ ಪಿಎಸ್ಎಲ್ ಎಂದು ಹೇಳಿ ಭಾರತೀಯರ ಕೆಂಗಣ್ಣಿಗೆ ಗುರಿಯಾದ ಆಫ್ರಿದಿ
ಕೆಲವೇ ವರ್ಷಗಳಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಅನ್ನು ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್) ಹಿಂದಿಕ್ಕಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಹೇಳಿದ್ದಾರೆ...

Published On :
ನವದೆಹಲಿ: ಕೆಲವೇ ವರ್ಷಗಳಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಅನ್ನು ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್) ಹಿಂದಿಕ್ಕಲಿದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ಕಾಶ್ಮೀರದಲ್ಲಿ ಅಮಾಯಕರು ಹತ್ಯೆಯಾಗುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಹಿದ್ ಆಫ್ರಿದಿ ಇದೀಗ ಮತ್ತೊಮ್ಮೆ ಐಪಿಎಲ್ ಬಗ್ಗೆ ಹೇಳಿಕೆ ನೀಡುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಐಪಿಎಲ್ ಗೆ ಎದುರು ನೋಡುತ್ತಿದ್ದರೆ ಇತ್ತ ಆಫ್ರಿದಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಆಡಲು ನಮಗೆ ಅವಕಾಶ ನೀಡುತ್ತೇವೆಂದರು ನಾವು ಐಪಿಎಲ್ ನಲ್ಲಿ ಆಡಲು ಬರುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಕೆಲವೇ ವರ್ಷಗಳಲ್ಲಿ ಪಿಎಸ್ಎಲ್ ಐಪಿಎಲ್ ಅನ್ನು ಹಿಂದಿಕ್ಕಲಿದೆ. ನಾವು ಪಿಎಸ್ಎಲ್ ನಲ್ಲಿಯೇ ಸಂತೋಷದಿಂದ ಆಡುತ್ತಿದ್ದು ನಮಗೆ ಐಪಿಎಲ್ ಅವಶ್ಯಕತೆಯಿಲ್ಲ. ಮುಂದಿನ ದಿನಗಳಲ್ಲಿ ಐಪಿಎಲ್ ಗಿಂತ ಪಿಎಸ್ಎಲ್ ದೊಡ್ಡದಾಗಿ ಬೆಳೆಯಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


