ಕೊಹ್ಲಿ ನಂತರ ಓರ್ವ ಬೌಲರ್ ಟೀಂ ಇಂಡಿಯಾದ ನಾಯಕನಾಗಬೇಕು: ಸೆಹ್ವಾಗ್
ಟೀಂ ಇಂಡಿಯಾದ ಮಾಜಿ ಆಟಗಾರ ಪ್ರಸ್ತುತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ವೀರೇಂದ್ರ ಸೆಹ್ವಾಗ್ ಅವರು ವಿರಾಟ್ ಕೊಹ್ಲಿ ನಂತರ ಬೌಲರ್ ಒಬ್ಬರಿಗೆ...

Published On :
ಮೋಹಾಲಿ: ಟೀಂ ಇಂಡಿಯಾದ ಮಾಜಿ ಆಟಗಾರ ಪ್ರಸ್ತುತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ವೀರೇಂದ್ರ ಸೆಹ್ವಾಗ್ ಅವರು ವಿರಾಟ್ ಕೊಹ್ಲಿ ನಂತರ ಬೌಲರ್ ಒಬ್ಬರಿಗೆ ಟೀಂ ಇಂಡಿಯಾದ ನಾಯಕತ್ವ ಸಿಗಬೇಕು ಎಂದು ಹೇಳಿದ್ದಾರೆ.
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಪಂಜಾಬ್ ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯ ನಾಳೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಈ ವೇಳೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನೂತನ ಸಾರಥಿ ಆರ್ ಅಶ್ವಿನ್ ಬಗ್ಗೆ ಏನು ನಿರೀಕ್ಷೆ ಇಟ್ಟುಕೊಂಡಿದ್ದೀರಾ ಎಂದು ಕೇಳಿದ್ದಕ್ಕೆ ಉತ್ತರಿಸಿದ ಅವರು ನಾನು ಅಶ್ವಿನ್ ಅವರೊಂದಿಗೆ ಆಡಿದ್ದೇನೆ. ಅವರ ಆಲೋಚನೆಗಳು ಏನು ಎಂಬುದು ತಿಳಿದಿದೆ ಎಂದರು.
ಅಶ್ವಿನ್ ರನ್ನು ಪಂಜಾಬ್ ತಂಡದ ನಾಯಕನನ್ನಾಗಿ ಮಾಡಿರುವುದು ಉತ್ತಮ ನಿರ್ಧಾರ. ನಾನು ಅಶ್ವಿನ್ ಅವರ ಅಭಿಮಾನಿ. ನಾನು ಕಪಿಲ್ ದೇವ್, ಇಮ್ರಾನ್ ಖಾನ್, ವಾಸೀಂ ಅಕ್ರಂ ಅವರ ನಾಯಕತ್ವವನ್ನು ನೋಡಿದ್ದೇನೆ. ಇತ್ತೀಚೆಗೆ ಯಾವ ಒಬ್ಬ ಬೌಲರ್ ಸಹ ತಂಡದ ನಾಯಕನಾಗಿಲ್ಲ. ವಿರಾಟ್ ಕೊಹ್ಲಿ ನಂತರ ಬೌಲರ್ ಒಬ್ಬರಿಗೆ ನಾಯಕತ್ವ ಸಿಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಂಜಾಬ್ ತಂಡದ ಕುರಿತಂತೆ ಮಾತನಾಡಿದ ಅವರು ಕಳೆದ ಹತ್ತು ಆವೃತ್ತಿಗಳಿಗೆ ಹೋಲಿಸಿದರೆ ಈ ಬಾರಿ ನಮ್ಮ ತಂಡ ಬಲಿಷ್ಠವಾಗಿದೆ. ನಮ್ಮ ತಂಡದಲ್ಲಿ ಸಿಂಗಲ್ಸ್ ಗಿಂತ ಸಿಕ್ಸರ್ ಬೌಂಡರಿ ಬಾರಿಸುವ ಆಟಗಾರರನ್ನು ತೆಗೆದುಕೊಳ್ಳಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿVirender Sehwagವೀರೇಂದ್ರ ಸೆಹ್ವಾಗ್Kings XI Punjabಕಿಂಗ್ಸ್ ಇಲೆವೆನ್ ಪಂಜಾಬ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


