ಕ್ರಿಕೆಟ್

ನಿಷೇಧಗೊಂಡಿದ್ದ ಸಿಎಸ್‌ಕೆ ತಂಡಕ್ಕೆ ತವರಿನಲ್ಲಿ ಇಂದು ಮೊದಲ ಪಂದ್ಯ!

ಮ್ಯಾಚ್ ಫಿಕ್ಸಿಂಗ್ ಆರೋಪದಿಂದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ನಿಷೇಧಗೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 11ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದ್ದು

ನಿಷೇಧಗೊಂಡಿದ್ದ ಸಿಎಸ್‌ಕೆ ತಂಡಕ್ಕೆ ತವರಿನಲ್ಲಿ ಇಂದು ಮೊದಲ ಪಂದ್ಯ!
ಚೆನ್ನೈ ಸೂಪರ್ ಕಿಂಗ್ಸ್
Published On :
ಚೆನ್ನೈ: ಮ್ಯಾಚ್ ಫಿಕ್ಸಿಂಗ್ ಆರೋಪದಿಂದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಿಂದ ನಿಷೇಧಗೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 11ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದ್ದು ಎರಡು ವರ್ಷಗಳ ಬಳಿಕ ತವರಿನಲ್ಲಿ ಮೊದಲ ಪಂದ್ಯವನ್ನು ಆಡಲಿದೆ. 
ಚೇಪಾಕ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ತವರಿನಲ್ಲಿ ಜಯ ಓಟ ಮುಂದುವರಿಸಲು ಚೆನ್ನೈ ಕಾತರಿಸುತ್ತಿದೆ. 
ಸಿಎಸ್‌ಕೆ ಅಭ್ಯಾಸ ಪಂದ್ಯಕ್ಕೇ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇನ್ನು ಇಂದಿನ ಪಂದ್ಯದಲ್ಲಿ ಧೋನಿ ಹಾಗೂ ತಂಡವನ್ನು ಸ್ವಾಗತಿಸಲು ತುದಿಗಾಗಲ್ಲಿ ನಿಂತಿದ್ದಾರೆ. 
ಇನ್ನು ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ನಲ್ಲಿ ಶುಭಾರಂಭ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.