ಕ್ರಿಕೆಟ್

ಆರ್‌ಸಿಬಿಗೆ ಎಬಿಡಿಯೇ ಆಪತ್ಭಾಂದವನೆಂದು ಮತ್ತೆ ಸಾಬೀತಾಯ್ತು!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಪ್ರಾಯಾಸದ ಗೆಲುವು ಸಾಧಿಸಿದೆ...

ಆರ್‌ಸಿಬಿಗೆ ಎಬಿಡಿಯೇ ಆಪತ್ಭಾಂದವನೆಂದು ಮತ್ತೆ ಸಾಬೀತಾಯ್ತು!
ಎಬಿ ಡಿವಿಲಿಯರ್ಸ್
Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಪ್ರಾಯಾಸದ ಗೆಲುವು ಸಾಧಿಸಿದೆ. 
ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿ ತಂಡ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರು. ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನೀಡಿದ 156 ರನ್ ಗಳ ಗುರಿ  ಬೆನ್ನಟ್ಟಲು ಪ್ರಾಯಾಸಪಡಬೇಕಾಯಿತು. ಅಂತೂ ಎಬಿ ಡಿವಿಲಿಯರ್ಸ್ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಆರ್‌ಸಿಬಿ ಟೂರ್ನಿಯಲ್ಲಿ ಗೆಲುವಿನ ನಗೆ ಬೀರಿದೆ. 
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಪಂಜಾಬ್ ತಂಡ ನಿಗದಿತ ಓವರ್ ನಲ್ಲಿ 155 ರನ್ ಗಳನ್ನು ಪೇರಿಸಿತ್ತು. 156 ರನ್ ಗಳ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸ್ಫೋಟಕ ಬ್ಯಾಟ್ಸ್ ಮನ್ ಬ್ರೆಂಡನ್ ಮೆಕ್ಕಲಂ ಶೂನ್ಯಕ್ಕೆ ಔಟಾದರು. ನಂತರ ಜತೆಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಹೊದಗಿಸಿದರು. 
ಉತ್ತಮವಾಗಿ ಆಡುತ್ತಿದ್ದ ಕೊಹ್ಲಿ 21 ರನ್ ಗಳಿಗೆ ಔಟ್ ಆಗಿ ಪೆವಲಿಯನ್ ಸೇರಿದರು. ಈ ವೇಳೆ ಕಣಕ್ಕಿಳಿದ ಎಬಿಡಿ ವಿಲಿಯರ್ಸ್ ತಾಳ್ಮೆಯ ಆಟವಾಡಿ ತಂಡವನ್ನು ಗೆಲುವಿನ ಹಾದಿಗೆ ತಂದರು. ಈ ನಡುವೆ 45 ರನ್ ಗಳಿಸಿದ್ದ ಡಿಕಾಕ್ ಔಟಾದರು. 17ನೇ ಓವರ್ ನಲ್ಲಿ ಎಬಿಡಿ ಎರಡು ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ 19 ರನ್ ಕಲೆ ಹಾಕಿದ್ದು ತಂಡ ಗೆಲುವಿನ ಹಾದಿಗೆ ಹತ್ತಿರವಾಯಿತು. 
ಎಬಿಡಿ ವಿಲಿಯರ್ಸ್ 40 ಎಸೆತಗಳಲ್ಲಿ 4 ಸಿಕ್ಸರ್, 2 ಬೌಂಡರಿ ಸೇರಿದಂತೆ 57 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.