ಐಪಿಎಲ್ 2018: ಕೋಲ್ಕತಾ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಜಯ
ದಿನೇಶ್ ಕಾರ್ತಿಕ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ತವರಿನಲ್ಲೇ ಮುಖಭಂಗ ಅನುಭವಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

Published On :
ಕೋಲ್ಕತಾ: ದಿನೇಶ್ ಕಾರ್ತಿಕ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ ತವರಿನಲ್ಲೇ ಮುಖಭಂಗ ಅನುಭವಿಸಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 5 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.
ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ನೀಡಿದ್ದ 139 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನ ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 19 ಓವರ್ ನಲ್ಲಿ 5 ವಿಕೆಟ್ ಕಳೆದುಕೊಂಡು ಸಾಧಿಸಿತು. ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯ ತಡವಾಗಿ ಆರಂಭವಾಗಿತ್ತು. ಟಾಸ್ ಗೆದ್ದ ಸನ್ ರೈಸರ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಕೋಲ್ಕತಾ ಹೈದರಾಬಾದ್ ತಂಡದ ಬೌಲಿಂಗ್ ದಾಳಿಗೆ ತತ್ತರಿಸಿ ಹೋಯಿತು.
ಭುವನೇಶ್ವರ್ ಕುಮಾರ್ 3 ವಿಕೆಟ್ ಕಬಳಿಸಿದರೆ, ಬಿಲ್ಲಿ ಮತ್ತು ಶಕೀಬ್ ಅಲ್ ಹಸನ್ ತಲಾ ವಿಕೆಟ್ ಕಬಳಿಸಿ ಕೋಲ್ಕತ್ ರನ್ ವೇಗಕ್ಕೆ ಕಡಿವಾಣ ಹಾಕಿದರು. ಅಂತಿಮವಾಗಿ ಕೋಲ್ಕತಾ ತಂಡ ಆರಂಭಿಕ ಆಟಗಾರ ಲಿನ್ನ್ (49 ರನ್) ಮತ್ತು ನಾಯಕ ದಿನೇಶ್ ಕಾರ್ತಿಕ್ 29 ರನ್ ಗಳ ಅತ್ಯಲ್ಪ ಕಾಣಿಕೆಯಿಂದಾಗಿ 130ರ ಗಡಿ ದಾಟಿತು. ಈ ಗುರಿಯನ್ನು ಬೆನ್ನುಹತ್ತಿದ ಹೈದರಾಬಾದ್ ತಂಡ ನಾಯಕ ಕೇನ್ ವಿಲಿಯಮ್ಸನ್ ಅವರ ಅರ್ಧಶತಕದ ಜೊತೆಯಾಟದ ನೆರವಿನಿಂದ ಗೆಲುವು ಸಾಧಿಸಿತು.
ಕೋಲ್ಕತಾ ಪರ ಸುನಿಲ್ ನರೇನ್ 2, ಕುಲದೀಪ್ ಯಾದವ್, ಪಿಯೂಶ್ ಚಾವ್ಲಾ ಮತ್ತು ಮಿಚೆಲ್ ಜಾನ್ಸನ್ ತಲಾ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Kolkataಕೋಲ್ಕತಾKolkata Knight Ridersಕೋಲ್ಕತಾ ನೈಟ್ ರೈಡರ್ಸ್Sunrisers Hyderabadಸನ್ ರೈಸರ್ಸ್ ಹೈದರಾಬಾದ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


