ಕ್ರಿಕೆಟ್

ಐಪಿಎಲ್ 2018: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ಗೆ 4 ರನ್ ಗಳ ರೋಚಕ ಜಯ

ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.

ಐಪಿಎಲ್ 2018: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ಗೆ 4 ರನ್ ಗಳ ರೋಚಕ ಜಯ
ಗೆಲುವಿಗಾಗಿ ಶ್ರಮಿಸಿದ ಧೋನಿ
Published On :
ಮೊಹಾಲಿ: ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.
ಪಂಜಾಬ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತದ ಗುರಿ ಬೆನ್ನು ಹತ್ತಿದ ಚೆನ್ನೈ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 193 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಪಂದ್ಯದಲ್ಲಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (ಅಜೇಯ 79 ರನ್) ಮತ್ತು ಅಂಬಾಟಿ ರಾಯುಡು (49 ರನ್)ಗಳ ಅಮೋಘ ಬ್ಯಾಟಿಂಗ್ ಹೊರತಾಗಿಯೂ ಚೆನ್ನೈ ತಂಡ ವಿರೋಚಿತ ಸೋಲು ಅನುಭವಿಸಿತು.
ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದ ಚೆನ್ನೈ ತಂಡಕ್ಕ ಅಂಬಾಟಿ ರಾಯುಡು ಆಸರೆಯಾದರು. ರಾಯುಡು 49 ರನ್ ಗಳಿಸಿದ್ದಾಗ ಅಶ್ವಿನ್ ಅವರನ್ನು ರನ್ ಔಟ್ ಮಾಡಿದರು. ಬಳಿಕ ಬಂದ ಧೋನಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದರೂ ಬಳಿಕ ಲಯ ಕಂಡುಕೊಂಡ ಧೋನಿ ಕ್ರಮೇಣ ರನ್ ಗತಿ ಹೆಚ್ಚಿಸಿದರು. ನೋಡ ನೋಡುತ್ತಿದ್ದಂತೆಯೇ ಅರ್ಧಶತಕ ಸಿಡಿಸಿದ ಧೋನಿ, 5 ಸಿಕ್ಸರ್ ಮತ್ತು 6 ಬೌಂಡರಿಗಳ ಮೂಲಕ 79 ರನ್ ಗಳಿಸಿ ಅಜೇಯರಾಗಿ ಉಳಿದರು.
ಅಂತಿಮ ಹಂತದಲ್ಲಿ ಧೋನಿಗಿ ರವೀಂದ್ರ ಜಡೇಜಾ (19 ರನ್) ಸಾಥ್ ನೀಡಿದರಾದರೂ, ಅಂತ್ಯದಲ್ಲಿ ವಿಕೆಟ್ ಒಪ್ಪಿಸಿ ಹೊರ ನಡೆದರು. ಅಂತಿಮವಾಗಿ ಚೆನ್ನೈ ತಂಡ ನಿಗದಿತ 20 ಓವರ್ ಗಳಲ್ಲಿ 193 ರನ್ ಗಳನ್ನಷ್ಟೇ ಗಳಿಸಿ 4 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಅನುಭವಿಸಿತು.
ಇದಕ್ಕೊ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡ ಕ್ರಿಸ್ ಗೇಯ್ಲ್ ಅವರ ಸಿಡಿಲಬ್ಬರದ ಬ್ಯಾಟಿಂಗ್ (63 ರನ್), ಕೆಎಲ್ ರಾಹುಲ್ (37 ರನ್) ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.