ಹರಾಜ್ ಆಗದೆ ಉಳಿದಿದ್ದ ಗೇಯ್ಲ್ ಕೈಹಿಡಿದ 'ಪ್ರೀತಿ ಜಿಂಟಾ'; ಗೇಯ್ಲ್ ಅಬ್ಬರಕ್ಕೆ ಐಪಿಎಲ್ ದಂಗು
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಹರಾಜಿನಲ್ಲಿ ಸೇಲ್ ಆಗದೆ ಇಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ರನ್ನು ಅಂತಿಮವಾಗಿ ಕಿಂಗ್ಸ್...
Published On :
ಮೊಹಾಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಹರಾಜಿನಲ್ಲಿ ಸೇಲ್ ಆಗದೆ ಇಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ರನ್ನು ಅಂತಿಮವಾಗಿ ಕಿಂಗ್ಸ್ ಇಲೆವೆನ್ ತಂಡದ ಮಾಲೀಕರಾಗಿರುವ ಪ್ರೀತಿ ಜಿಂಟಾ ಅವರು ಗೇಯ್ಲ್ ರನ್ನು ಮೂಲ ಬೆಲೆಗೆ ಖರೀದಿಸಿದ್ದರು.
ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡಿದ್ದ ಕ್ರಿಸ್ ಗೇಯ್ಲ್ ಅಷ್ಟೇನು ಪ್ರದರ್ಶನ ನೀಡಿದ್ದರಿಂದ ಆರ್ಸಿಬಿ ಸಹ ಅವರನ್ನು ಖರೀದಿಸಿರಲಿಲ್ಲ. ಅಂತಿಮವಾಗಿ ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ಪಂಜಾಬ್ ತಂಡದ ಮೆಂಟರ್ ಆಗಿರುವ ವೀರೇಂದ್ರ ಸೆಹ್ವಾಗ್ ಅವರು ಗೇಯ್ಲ್ ರನ್ನು ಖರೀದಿಸಿದರು.
ಇದೀಗ ಪಂಜಾಬ್ ಪರ ಆಡುತ್ತಿರುವ ಕ್ರಿಸ್ ಗೇಯ್ಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ 1 ಬೌಂಡರಿ ಹಾಗೂ 11 ಸಿಕ್ಸರ್ ಗಳ ನೆರವಿನಿಂದ 104 ರನ್ ಗಳಿಸಿ ತಂಡದ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಇನ್ನು ಐಪಿಎಲ್ ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಗೇಯ್ಲ್ ಇಲ್ಲಿಯವರೆಗೂ 6 ಶತಕಗಳನ್ನು ಸಿಡಿಸಿದ್ದಾರೆ. ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ 4 ಶತಕಗಳನ್ನು ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chris Gayleಕ್ರಿಸ್ ಗೇಯ್ಲ್Sunrisers Hyderabadಸನ್ ರೈಸರ್ಸ್ ಹೈದರಾಬಾದ್Kings XI Punjabಕಿಂಗ್ಸ್ ಇಲೆವೆನ್ ಪಂಜಾಬ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

