ಕ್ರಿಸ್ ಗೇಯ್ಲ್ ಅಬ್ಬರಕ್ಕೆ ಕಳಚಿ ಬಿತ್ತು ಸನ್ ರೈಸರ್ಸ್ ಹೈದರಾಬಾದ್ ಗೆಲುವಿನ ಸರಪಳಿ
ಮೊಹಾಲಿಯಲ್ಲಿ ಗುರುವಾರ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಟಿ20 ಪಂದ್ಯದಲ್ಲಿ ಪಂಜಾಬ್ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಮೊಹಾಲಿ: ಮೊಹಾಲಿಯಲ್ಲಿ ಗುರುವಾರ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಟಿ20 ಪಂದ್ಯದಲ್ಲಿ ಪಂಜಾಬ್ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಆರಂಭಿಕ ಆಟಗಾರ ಕ್ರಿಸ್ ಗೇಯ್ಲ್ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಪಂಜಾಬ್ ತಂಡ ಹೈದರಾಬಾದ್ ಗೆ ಗೆಲ್ಲಲು 194 ರನ್ ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಹತ್ತಿದೆ ಹೈದರಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ ಪಂಜಾಬ್ ಎದುರು 15 ರನ್ ಗಳ ಅಂತರದಲ್ಲಿ ಸೋಲು ಕಂಡಿತು.
ಕಳೆದ ಮೂರು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಜಯ ಕಂಡಿದ್ದ ಹೈದರಾಬಾದ್ ಗೆ ಇದು ಮೊದಲ ಸೋಲಾಗಿದೆ.
ಮೊದಲ ಓವರ್ ನಲ್ಲಿಯೇ ಗಾಯಗೊಂಡ ಶಿಖರ್ ಧವನ್ ಕ್ರೀಸ್ ತೊರೆದಿದ್ದು, ಸನ್ ರೈಸರ್ಸ್ ಗೆ ಹಿನ್ನಡೆಯುಂಟು ಮಾಡಿತು. ಸಾಹ (06) ಬೇಗನೆ ಔಟಾದರು, ಪವರ್ ಪ್ಲೇ ಮುಗಿಯುವ ಮೊದಲೇ ಯೂಸುಫ್ ಪಠಾಣ್ (19) ಸಹ ಔಟಾದರು. 3 ಪ್ರಮುಖ ಬ್ಯಾಟ್ಸ್ ಮನ್ ಗಳನ್ನು ಕಳೆದುಕೊಂಡ ಸನ್ ರೈಸರ್ಸ್ ಭಾರೀ ಒತ್ತಡಕ್ಕೆ ಸಿಲುಕಿತು.
4ನೇ ವಿಕೆಟ್ ಗೆ ಕ್ರೀಸ್ ಹಂಚಿಕೊಂಡ ಕೇನ್ ವಿಲಿಯಮ್ಸನ್ ಹಾಗೂ ಮನೀಶ್ ನಡುವೆ ಉತ್ತಮ ಜೊತೆಯಾಟ ಮೂಡಿಬಂದರೂ, ತಂಡ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದು ಮುಳುವಾಯಿತು. 17ನೇ ಓವರ್ ವರೆಗೂ ತಂಡ ಕೇವಲ 2 ಸಿಕ್ಸರ್ ಅಷ್ಟೇ ಬಾರಿಸಿತು. ವಿಲಿಯಮ್ಸನ್ (54) ರನ್ ಗಳಿಗೆ ಓಟಾದರೆ, ಪಾಂಡೆ (54) ರನ್ ಗಳಿಸಿ ಅಜೇಯರಾಗಿ ಉಳಿದರು.
ಇನ್ನು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡಕ್ಕೆ ಸ್ಫೋಟಕ ಬ್ಯಾಟ್ಸಮನ್ ಕ್ರಿಸ್ ಗೇಯ್ಲ್ ಬೆನ್ನೆಲುಬಾಗಿ ನಿಂತರು. ತಂಡ ಗಳಿಸಿದ 193 ರನ್ ಗಳ ಪೈಕಿ ಗೇಯ್ಲ್ ಒಬ್ಬರೇ 104 ರನ್ ಪೇರಿಸಿದ್ದರು. ಉಳಿದಂತೆ ಕರುಣ್ ನಾಯರ್ 31 ರನ್ ಸೇರಿಸಿ ತಂಡದ ಮೊತ್ತ 190ರ ಗಡಿ ದಾಟುವಂತೆ ನೋಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Chris Gayleಕ್ರಿಸ್ ಗೇಯ್ಲ್ಸನ್ ರೈಸರ್ಸ್ ಹೈದರಾಬಾದ್Kings XI Punjabಕಿಂಗ್ಸ್ ಇಲೆವನ್ ಪಂಜಾಬ್sun risers hyderabadMohaliಮೊಹಾಲಿIPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


