ಕ್ರಿಕೆಟ್

ಐಪಿಎಲ್: ಹೈದರಾಬಾದ್ ವಿರುದ್ಧ ಚೆನ್ನೈಗೆ 4 ರನ್‌ ಗಳ ರೋಚಕ ಗೆಲುವು

ಐಪಿಎಲ್ ಟಿ20 ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ರನ್ ಗಳ....

ಐಪಿಎಲ್: ಹೈದರಾಬಾದ್ ವಿರುದ್ಧ ಚೆನ್ನೈಗೆ 4 ರನ್‌ ಗಳ ರೋಚಕ ಗೆಲುವು
ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು
Published On :
ಹೈದರಾಬಾದ್: ಐಪಿಎಲ್ ಟಿ20 ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 4 ರನ್ ಗಳ ರೋಚಕ ಗೆಲುವು ಸಾಧಿಸಿದೆ. 
ಇಂದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್‌ ಟಾಸ್‌ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ಅಂಬಟಿ ರಾಯುಡು (79) ಹಾಗೂ ಸುರೇಶ್ ರೈನಾ (54*) ಅವರ ಆಕರ್ಷಕ ಅರ್ಧಶತಕಗಳ ನೆರವಿನೊಂದಿಗೆ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 182 ರನ್‌ ಗಳಿಸಿತು.
ಗೆಲುವಿಗೆ ಚೆನ್ನೈ ನೀಡಿದ 183 ರನ್‌ ಗಳ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ, 6 ವಿಕೆಟ್‌ ನಷ್ಟಕ್ಕೆ 178 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ  ನಾಯಕ ವಿಲಿಯಮ್ಸನ್ (84) ದಿಟ್ಟ ಹೋರಾಟವು ವ್ಯರ್ಥವಾಗಿದೆ. 
ಈ ಗೆಲುವಿನೊಂದಿಗೆ ಚೆನ್ನೈ ಎಂಟು ಅಂಕಗಳನ್ನು ಸಂಪಾದಿಸಿದ್ದು, ಅಂಕಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.