ಐಪಿಎಲ್: ಎಬಿಡಿ ಅಬ್ಬರಕ್ಕೆ ಡೆಲ್ಲಿ ತತ್ತರ, ಆರ್ ಸಿಬಿಗೆ 6 ವಿಕೆಟ್ ಜಯ
ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಆರು ವಿಕೆಟ್ಗಳ ಭರ್ಜರಿ...

Published On :
ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಡೇರ್ಡೆವಿಲ್ಸ್, ನಿಗದಿತ 20 ಓವರ್ ಗಳಲ್ಲಿ 174 ರನ್ ಸೇರಿಸಿತು.
ಗೆಲುವಿಗೆ 175 ರನ್ ಗಳ ಗುರಿ ಬೆನ್ನು ಹತ್ತಿದ ರಾಯಲ್ ಚಾಲೆಂಜರ್ಸ್ ತಂಡ ಡಿವಿಲಿಯರ್ಸ್ ಬಾರಿಸಿದ ಬಿರುಸಿನ ಅರ್ಧ ಶತಕ(90) ನೆರವಿನೊಂದಿಗೆ ಇನ್ನೂ ಎರಡು ಓವರ್ಗಳು ಬಾಕಿ ಇರುವಾಗಲೇ ಗೆಲುವು ದಾಖಲಿಸಿತು.
ರಾಯಲ್ ಚಾಲೆಂಜರ್ಸ್ ಆರಂಭದಲ್ಲಿ ಮುಗ್ಗರಿಸಿದರೂ ನಂತರ ಬಂದ ನಾಯಕ ವಿರಾಟ್ ಕೊಹ್ಲಿ ಮತ್ತು ಡಿವಿಲಿಯರ್ ಜೋಡಿ ಎಚ್ಚರಿಕೆಯಿಂದ ತಂಡವನ್ನು ಗೆಲುವಿನತ್ತ ಕೊಂಡೊಯ್ಯಿತು. ಇದರೊಂದಿಗೆ ಸತತ ಸೋಲುಗಳ ಬಳಿಕ ಆರ್ ಸಿಬಿ ಗೆಲುವಿನ ಹಾದಿಗೆ ಮರಳಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಸಹ, ಆರಂಭಿಕರಾದ ಜಾಸನ್ ರಾಯ್ ಮತ್ತು ಗೌತಮ್ ಗಂಭೀರ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತ ಅನುಭವಿಸಿತ್ತು. ಆದರೆ, ನಂತರ ಬಂದ ಶ್ರೇಯಸ್ ಅಯ್ಯರ್ 52(31) ಮತ್ತು ಆರ್ ಆರ್ ಪಂಥ್ 85 (48) ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಅಂತಿಮವಾಗಿ 20 ಓವರ್ಗಳಲ್ಲಿ ಐದು ವಿಕೆಟ್ಗಳ ನಷ್ಟದೊಂದಿಗೆ ತಂಡ 174ರನ್ಗಳ ಸವಾಲಿನ ಮೊತ್ತವನ್ನು ದಾಖಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
IPLಐಪಿಎಲ್Royal Challengers BangaloreDelhi Daredevilsರಾಯಲ್ ಚಾಲೆಂಜರ್ಸ್ ಬೆಂಗಳೂರುಡೆಲ್ಲಿ ಡೇರ್ ಡೆವಿಲ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


