ಗುರು, ಹೋಗಿ ಹೇಳು 'ಈ ಸಲ ಕಪ್ ನಮ್ದೆ' ಎಂದ ಕೆಎಲ್ ರಾಹುಲ್; ಫೇಸ್ಬುಕ್ ವಿಡಿಯೋ ವೈರಲ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿ ಪ್ರಾರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂದು ಹೇಳುತ್ತಿದ್ದಾರೆ...

Published On :
ಮೊಹಾಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿ ಪ್ರಾರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಅಭಿಮಾನಿಗಳು ಈ ಸಲ ಕಪ್ ನಮ್ದೆ ಎಂದು ಹೇಳುತ್ತಿದ್ದಾರೆ.
ಆದರೆ ಮಾಜಿ ಆರ್ಸಿಬಿ ತಂಡದ ಆಟಗಾರ ಹಾಲಿ ಕಿಂಗ್ಸ್ ಇಲೆವೆನ್ಸ್ ಪಂಜಾಬ್ ತಂಡದ ಬ್ಯಾಟ್ಸ್ ಮನ್ ಕನ್ನಡಿಗ ಕೆಎಲ್ ರಾಹುಲ್ ಫೇಸ್ ಬುಕ್ ಲೈವ್ ನಲ್ಲಿ ಗುರು...ಹೋಗಿ ಹೇಳು...ಈ ಸಲ ಕಪ್ ನಮ್ದೆ ಎಂದು ತಿರುಗೇಟು ನೀಡಿದ್ದಾರೆ.
ಕೆಎಲ್ ರಾಹುಲ್ ಗೆ ಪಂಜಾಬ್ ಪರ ಆಡುತ್ತಿರುವ ಮತ್ತೋರ್ವ ಕನ್ನಡಿಗ ಕರುಣ್ ನಾಯರ್ ಕೂಡ ಸಾಥ್ ನೀಡಿದ್ದಾರೆ. ಈ ವಿಡಿಯೋ ಇದೀಗ ಫೇಸ್ ಬುಕ್ ಮತ್ತು ಟ್ವೀಟರ್ ನಲ್ಲಿ ವೈರಲ್ ಆಗಿದೆ.
ಐಪಿಎಲ್ ಟೂರ್ನಿಯಲ್ಲಿ ಸದ್ಯ 5 ಪಂದ್ಯಗಳನ್ನು ಆಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ 4 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು 5 ಪಂದ್ಯಗಳನ್ನು ಆಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 2 ಪಂದ್ಯಗಳನ್ನು ಗೆಲ್ಲುವ ಮೂಲಕ ಆರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KL Rahulಕೆಎಲ್ ರಾಹುಲ್RCBKings XI Punjabಕಿಂಗ್ಸ್ ಇಲೆವೆನ್ ಪಂಜಾಬ್ಆರ್ಸಿಬಿIPL 2018ಐಪಿಎಲ್ 2018Ee Sala Cup Namdeಈ ಸಲ ಕಪ್ ನಮ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


