ಐಪಿಎಲ್ 2018: ಡೆಲ್ಲಿ ಡೇರ್ಡೆವಿಲ್ಸ್ ಕಳಪೆ ಪ್ರದರ್ಶನ; ನಾಯಕತ್ವ ತ್ಯಜಿಸಿದ ಗಂಭೀರ್, ಶ್ರೇಯಸ್‌ಗೆ ಪಟ್ಟ
ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಬೇಸತ್ತು ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದಾರೆ...

Published On :
ನವದೆಹಲಿ: ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ಬೇಸತ್ತು ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದಾರೆ.
ಗಂಭೀರ್ ನಾಯಕತ್ವದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಆರು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ರನ್ ರೇಟ್ ನಲ್ಲೂ ತಂಡ ಹೇಳಿಕೊಳ್ಳುವಂತಾ ಸಾಧನೆ ಮಾಡಿಲ್ಲ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಗೌತಮ್ ಗಂಭೀರ್ ನಾಯಕತ್ವದಿಂದ ಕೆಳಗಿಳಿದಿದ್ದು ಯುವ ಆಟಗಾರ ಶ್ರೇಯಸ್ ಅಯ್ಯರ್ ನಾಯಕ್ವತ ವಹಿಸಲಿದ್ದಾರೆ.
ಮತ್ತೊಂದೆಡೆ ಗೌತಮ್ ಗಂಭೀರ್ ಸಹ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆರು ಪಂದ್ಯಗಳ ಪೈಕಿ ಗೌತಮ್ ಕೇವಲ 85 ರನ್ ಗಳನ್ನು ಮಾತ್ರ ಸಿಡಿಸಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 55 ರನ್ ಸಿಡಿಸಿದ್ದು ಬಿಟ್ಟರೆ ಇನ್ಯಾವ ಪಂದ್ಯದಲ್ಲೂ 20 ರನ್ ಗಳ ಗಡಿ ದಾಟಿಲ್ಲ.
ಗೌತಮ್ ಗಂಭೀರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎರಡು ಬಾರಿ ಚಾಂಪಿಯನ್ ತಂಡವನ್ನಾಗಿದ್ದರು. ಆದರೆ ಈ ಬಾರಿಯ ಐಪಿಎಲ್ ನಲ್ಲಿ ತಂಡವನ್ನು ಉತ್ತಮವಾಗಿ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gautam Gambhirಗೌತಮ್ ಗಂಭೀರ್ಡೆಲ್ಲಿ ಡೇರ್ ಡೆವಿಲ್ಸ್Delhi DaredevilsShreyas Iyerಶ್ರೇಯಸ್ ಅಯ್ಯರ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


