ಐಪಿಎಲ್: ಧೋನಿ, ರಾಯುಡು ಅಬ್ಬರದ ಆಟ, ಆರ್ ಸಿಬಿ ವಿರುದ್ಧ ಸಿಎಸ್ ಕೆ ಗೆ 5 ವಿಕೆಟ್ ಜಯ
ಮಹೇಂದ್ರ ಸಿಂಗ್ ಧೋನಿ ಹಾಗೂ ಅಂಬಾಟಿ ರಾಯುಡು ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್...

Published On :
ಬೆಂಗಳೂರು: ಮಹೇಂದ್ರ ಸಿಂಗ್ ಧೋನಿ ಹಾಗೂ ಅಂಬಾಟಿ ರಾಯುಡು ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಐದು ವಿಕೆಟುಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 205 ರನ್ಗಳಿಸುವ ಮೂಲಕ ಸಿಎಸ್ ಕೆ ಗೆಲುವಿಗೆ 206 ರನ್ಗಳ ಬೃಹತ್ ಗುರಿಯನ್ನು ನೀಡಿತು.
ಬೃಹತ್ ಮೊತ್ತ ಬೆನ್ನತ್ತಿದೆ ಸಿಎಸ್ ಕೆ ಆರಂಭದಲ್ಲೇ ಶೇನ್ ವಾಟ್ಸನ್ (7) ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಆದರೆ ಬಳಿಕ ಬಂದ ಅಂಬಾಟಿ ರಾಯುಡು(82) ಹಾಗೂ ಮಹೇಂದ್ರ ಸಿಂಗ್ ಧೋನಿ(70*) ಅವರ ಆಕರ್ಷಕ ಅರ್ಧ ಶತಕಗಳ ನೆರವಿನೊಂದಿಗೆ ಇನ್ನು 2 ಎಸೆತಗಳು ಬಾಕಿ ಇರುವಂತೆಯೇ ಗೆಲುವು ದಾಖಲಿಸಿತು.
ಆರ್ ಸಿಬಿ ಪರ ಎಬಿ ಡಿವಿಲಿಯರ್ಸ್(68), ಕ್ವಿಂಟನ್ ಡಿ ಕಾಕ್(53) ಹಾಗೂ ಮಂದೀಪ್ ಸಿಂಗ್(32) ರನ್ ಗಳ ಉತ್ತಮ ಕಾಣಿಕೆ ನೀಡಿದರು.
ಆರ್ ಸಿಬಿ ಪರ ಯಜುವೇಂದ್ರ ಚಹಾಲ್ ಎರಡು ವಿಕೆಟ್ ಪಡೆದರೆ, ಪವನ್ ನೇಗಿ ಹಾಗೂ ಉಮೇಶ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು. ಅಂಬಾಟಿ ರಾಯುಡು ರನೌಟ್ ಆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Royal Challengers BangaloreChennai Super Kingsರಾಯಲ್ ಚಾಲೆಂಜರ್ಸ್ ಬೆಂಗಳೂರುಚೆನ್ನೈ ಸೂಪರ್ ಕಿಂಗ್ಸ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


