ಕಳಪೆ ಪ್ರದರ್ಶನ: 2.8 ಕೋಟಿ ರೂ. ಐಪಿಎಲ್ ಸಂಭಾವನೆ ಪಡೆಯದಿರಲು ಗಂಭೀರ್ ನಿರ್ಧಾರ
ಐಪಿಎಲ್ 2018ನೇ ಸಾಲಿನ ಟೂರ್ನಿಯಲ್ಲಿ ದೆಹಲಿ ತಂಡದ ಸಾರಥ್ಯ ವಹಿಸಿದ್ದ ಗೌತಮ್ ಗಂಭೀರ್ ತಂಡದ ಕಳಪೆ ಪ್ರದರ್ಶನದಿಂದ ತೀವ್ರ ಬೇಸತ್ತಿದ್ದು, ನಾಯಕತ್ವ ಮಾತ್ರವಲ್ಲದೇ ಟೂರ್ನಿಗಾಗಿ ತಾವು ಪಡೆಯಬೇಕಿದ್ದ ಸಂಭಾವನೆಯನ್ನು ಕೂಡ ಪಡೆಯದೇ ಇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

Published On :
ನವದೆಹಲಿ: ಹಾಲಿ ಐಪಿಎಲ್ 2018ನೇ ಸಾಲಿನ ಟೂರ್ನಿಯಲ್ಲಿ ದೆಹಲಿ ತಂಡದ ಸಾರಥ್ಯ ವಹಿಸಿದ್ದ ಗೌತಮ್ ಗಂಭೀರ್ ತಂಡದ ಕಳಪೆ ಪ್ರದರ್ಶನದಿಂದ ತೀವ್ರ ಬೇಸತ್ತಿದ್ದು, ನಾಯಕತ್ವ ಮಾತ್ರವಲ್ಲದೇ ಟೂರ್ನಿಗಾಗಿ ತಾವು ಪಡೆಯಬೇಕಿದ್ದ ಸಂಭಾವನೆಯನ್ನು ಕೂಡ ಪಡೆಯದೇ ಇರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಸತತ ಸೋಲು ಕಾಣುತ್ತಿರುವ ಹಿನ್ನೆಲೆಯಲ್ಲಿ ಗೌತಮ್ ಗಂಭೀರ್ ತಂಡದ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದು ಮಾತ್ರವಲ್ಲದೇ ಫ್ರಾಂಚೈಸಿಯಿಂದ ತಮ್ಮ ಸಂಭಾವನೆಯನ್ನು ಪಡೆಯದಿರಲು ನಿರ್ಧರಿಸಿದ್ದಾರೆ.
ಈ ಹಿಂದೆ ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಹೊರ ಬಂದಿದ್ದ ಗೌತಮ್ ಗಂಭೀರ್ ಅವರನ್ನು ಡೆಲ್ಲಿ ಡೇರ್ಡೆವಿಲ್ಸ್ ತಂಡ 2.8 ಕೋಟಿ ರೂ.ಗೆ ಖರೀದಿಸಿತ್ತು. ಗಂಭೀರ್ ಪ್ರಸಕ್ತ ಐಪಿಎಲ್ ಋತುವಿನಲ್ಲಿ 6 ಪಂದ್ಯಗಳಿಂದ ಕೇವಲ 85 ರನ್ ಗಳಿಸಿದ್ದಾರೆ. ಅಲ್ಲದೆ ಡೆಲ್ಲಿ ತಂಡ ಅವರ ನಾಯಕತ್ವದಲ್ಲಿ ಆಡಿದ 6 ಪಂದ್ಯಗಳ ಪೈಕಿ 5ರಲ್ಲಿ ಸೋಲನುಭವಿಸಿದೆ. ತಂಡದ ಈ ಕಳಪೆ ಪ್ರದರ್ಶನದಿಂದ ತೀವ್ರ ಬೇಸತ್ತಿರುವ ಗೌತಮ್ ಗಂಭೀರ್, ಈ ಋತುವಿನಲ್ಲಿ ಸಂಭಾವನೆಯನ್ನು ಪಡೆಯದಿರಲು ನಿರ್ಧರಿಸಿದ್ದಾರೆ. ಜತೆಗೆ ಉಳಿದ ಪಂದ್ಯಗಳಲ್ಲಿ ಉಚಿತವಾಗಿ ಆಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಗೌತಮ್ ಗಂಭೀರ್ ಕ್ರೀಡಾ ಸ್ಪೂರ್ತಿಯನ್ನು ಮರೆದಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಗಂಭೀರ್ ಡೆಲ್ಲಿ ತಂಡದ ನಾಯಕ ಸ್ಥಾನದಿಂದ ಕೆಳಗಿಳಿದಿದ್ದರು. ಗಂಭೀರ್ ಬದಲಿಗೆ ತಂಡದ ಉದಯೋನ್ಮುಖ ಆಟಗಾರ ಶ್ರೇಯಸ್ ಅಯ್ಯರ್ ನಾಯಕನ ಸ್ಥಾನ ಅಲಂಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Gautam Gambhirಗೌತಮ್ ಗಂಭೀರ್ಡೆಲ್ಲಿ ಡೇರ್ ಡೆವಿಲ್ಸ್Delhi DaredevilsShreyas Iyerಶ್ರೇಯಸ್ ಅಯ್ಯರ್IPL 2018ಐಪಿಎಲ್ 2018
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


