ಐಪಿಎಲ್ 2018: ಸತತ 5ನೇ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಐದನೇ ಸೋಲು ಕಂಡಿದೆ...

Published On :
ಬೆಂಗಳೂರು: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಐದನೇ ಸೋಲು ಕಂಡಿದೆ.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡ 6 ವಿಕೆಟ್ ಗಳಿಂದ ಸೋಲು ಕಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 175 ರನ್ ಪೇರಿಸಿತ್ತು. ಗೆಲ್ಲಲ್ಲು 176 ರನ್ ಗಳ ಗುರಿ ಪಡೆದ ಕೋಲ್ಕತ್ತಾ ತಂಡ 6 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಕೋಲ್ಕತ್ತಾ ಪರ ಸುನೀಲ್ ನರೈನ್ 27, ರಾಬಿನ್ ಉತ್ತಪ್ಪ 36, ದಿನೇಶ್ ಕಾರ್ತಿಕ್ 23 ಮತ್ತು ಲ್ಯಾನ್ ಅಜೇಯ 62 ರನ್ ಗಳಿಸಿದ್ದಾರೆ.
ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 29, ಬ್ರೆಂಡಮ್ ಮೆಕಲಮ್ 38 ವಿರಾಟ್ ಕೊಹ್ಲಿ ಭರ್ಜರಿ ಅರ್ಧ ಶತಕ 68 ರನ್ ಬಾರಿಸಿದ್ದಾರೆ.
ಕೋಲ್ಕತ್ತಾ ಪರ ಆಂಡ್ಯೂ ರಸೇಲ್ 3 ಮತ್ತು ಕುಲದೀಪ್ ಯಾದವ್ 1 ವಿಕೆಟ್ ಪಡೆದಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ 7 ಪಂದ್ಯಗಳ ಪೈಕಿ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿRoyal Challengers BangaloreKolkata Knight Ridersರಾಯಲ್ ಚಾಲೆಂಜರ್ಸ್ ಬೆಂಗಳೂರುಕೋಲ್ಕತ್ತಾ ನೈಟ್ ರೈಡರ್ಸ್IPL 2018ಐಪಿಎಲ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


