ಕ್ರಿಕೆಟ್

ಮೊದಲ ಟೆಸ್ಟ್: ಅಶ್ವಿನ್, ಶಮಿ ಮಾರಕ ಬೌಲಿಂಗ್, 287 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್

ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಅವರು ನಾಲ್ಕು ವಿಕೆಟ್ ಗಳನ್ನು...

ಮೊದಲ ಟೆಸ್ಟ್: ಅಶ್ವಿನ್, ಶಮಿ ಮಾರಕ ಬೌಲಿಂಗ್, 287 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್
ಕೊಹ್ಲಿ-ಆರ್ ಅಶ್ವಿನ್
Published On :
ಬರ್ಮಿಂಗ್‌ ಹ್ಯಾಮ್‌: ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಅವರು ನಾಲ್ಕು ವಿಕೆಟ್ ಗಳನ್ನು ಪಡೆಯುವ ಮೂಲಕ ಆಂಗ್ಲರ ಓಟಕ್ಕೆ ಬ್ರೇಕ್ ಹಾಕಿದ್ದಾರೆ. 
ಎಡ್ಜ್‌ಬಾಸ್ಟನ್ ಮೈದಾನದಲ್ಲಿ ಪ್ರವಾಸಿ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ನಾಯಕ ಜೋ ರೂಟ್(80) ಹಾಗೂ ಜಾನಿ ಬೌರ್‌ಸ್ಟೋವ್ (70) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಇಂಗ್ಲೆಂಡ್ 90ನೇ ಓವರ್‌ಗಳಲ್ಲಿ 287 ರನ್ ಗಳಿಗೆ ಆಲೌಟ್ ಆಗಿದೆ. 
ಆಫ್ ಸ್ಪಿನ್ನರ್ ಅಶ್ವಿನ್ ಅವರು ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಆಲಿಸ್ಟಾರ್ ಕುಕ್(13) ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಆಂಗ್ಲರಿಗೆ ಮೊದಲ ಆಘಾತ ನೀಡಿದರು. ಈ ಹಂತದಲ್ಲಿ ನಾಯಕ ಜೋ ರೂಟ್ ಜತೆಗೂಡಿದ ಮಗದೋರ್ವ ಆರಂಭಿಕ ಕೇಟನ್‌ ಜೆನಿಂಗ್ಸ್‌ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ ಉತ್ತಮ ಜತೆಯಾಟವನ್ನು ಪ್ರದರ್ಶಿಸಿದರು.
ಇಂಗ್ಲೆಂಡ್ ಪರ ಕುಕ್ 13, ಜೆನ್ನಿಂಗ್ಸ್ 42, ಜೋ ರೂಟ್ 80, ಬೈರ್ಸ್ಟೋವ್ 70, ಕುರಾನ್ 24 ರನ್ ಗಳಿಸಿದ್ದಾರೆ. 
ಟೀಂ ಇಂಡಿಯಾ ಪರ ಆರ್ ಅಶ್ವಿನ್ 4, ಮೊಹಮ್ಮದ್ ಶಮಿ 3, ಉಮೇಶ್ ಯಾದವ್, ಇಶಾಂತ್ ಹಾಗೂ ಪಾಂಡ್ಯ ತಲಾ 1 ವಿಕೆಟ್ ಪಡೆದಿದ್ದಾರೆ. 
ಐದು ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ ಪ್ರಾರಂಭವಾಗಿದ್ದು, ಶುಭಾರಂಭ ಮಾಡಲು ಭಾರತ ಉತ್ಸುಕವಾಗಿ ಕಾಯುತ್ತಿದೆ.  2007 ರಿಂದ  ಈವರೆಗೂ ಇಂಗ್ಲೆಂಡ್ ನಲ್ಲಿ ಒಂದೇ ಒಂದೂ ಟೆಸ್ಟ್ ಸರಣಿಯನ್ನೂ ಗೆಲ್ಲದ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾಗಿದ್ದು, ರಾಹುಲ್ ದ್ರಾವಿಡ್ ನಂತರ ಕೊಹ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.