ಕ್ರಿಕೆಟ್

ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಆಕ್ರೋಶ!

ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ...

ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಆಕ್ರೋಶ!
ವಿರಾಟ್ ಕೊಹ್ಲಿ
Published On :
ಬರ್ಮಿಂಗ್ ಹ್ಯಾಮ್: ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿದ್ದು ಖ್ಯಾತ ಬ್ಯಾಟ್ಸ್‌ಮನ್‌ಗಳ ಕಳಪೆ ಬ್ಯಾಟಿಂಗ್‌ನಿಂದಾಗಿ ತಂಡ ಸೋಲು ಕಾಣಲು ಕಾರಣ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. 
ಪಂದ್ಯದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ಐತಿಹಾಸಿಕ ಪಂದ್ಯದಲ್ಲಿ ಭಾಗಿಯಾಗಿರುವ ಹೆಮ್ಮೆ ಇದೆ. ಆದರೆ ಕೆಲವೊಂದು ಕಳಪೆ ಹೊಡೆತಗಳು ಹಾಗೂ ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸಿದ್ದೇ ತಂಡದ ಸೋಲಿಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ 149 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು. ಇನ್ನು 194 ರನ್ ಗಳ ಅಲ್ಪ ಮೊತ್ತದ ಗುರಿ ಇದ್ದರು. ಯಾವುದೇ ಆಟಗಾರನು ಸಹ ಉತ್ತಮ ರನ್ ಗಳಿಕೆ ಮಾಡಲಿಲ್ಲ. ಇಂತಹ ಸಮಯದಲ್ಲೂ ಕೊಹ್ಲಿ 51 ರನ್ ಪೇರಿಸಿ ಗೆಲುವಿನ ದಡ ಸೇರಿಸಲು ಹೆಚ್ಚು ಶ್ರಮಿಸಿದ್ದರು.
ಆದರೆ ತಂಡ ಇಂಗ್ಲೆಂಡ್ ವಿರುದ್ಧ 31 ರನ್ ಗಳಿಂದ ವಿರೋಚಿತ ಸೋಲು ಕಂಡಿತ್ತು. ಇನ್ನು ತಂಡದಲ್ಲಿ ಬೌಲರ್ ಗಳೇ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಕೊಹ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.