ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಬಾರಿಸಿದ್ದು 200 ರನ್, ಉಳಿದವರಿಂದ ಒಟ್ಟು 216 ರನ್!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗಳಿಂದ ವಿರೋಚಿತ ಸೋಲು ಅನುಭವಿಸಿದೆ...

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಬಾರಿಸಿದ್ದು 200 ರನ್, ಉಳಿದವರಿಂದ ಒಟ್ಟು 216 ರನ್!
ವಿರಾಟ್ ಕೊಹ್ಲಿ
Published On :
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ ಗಳಿಂದ ವಿರೋಚಿತ ಸೋಲು ಅನುಭವಿಸಿದೆ. 
ಇನ್ನು ಟೀಂ ಇಂಡಿಯಾದ ಖ್ಯಾತ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನ ತಂಡ ಪಂದ್ಯ ಸೋಲಲು ಪ್ರಮುಖ ಕಾರಣವಾಗಿದೆ. ಮುರಳಿ ವಿಜಯ್, ಶಿಖರ್ ಧವನ್, ಕೆಎಲ್ ರಾಹುಲ್, ಅಜಿಂಕ್ಯ ರಹಾನೆ, ದಿನೇಶ್ ಕಾರ್ತಿಕ್ ಸೇರಿದಂತೆ ಸ್ಟಾರ್ ಬ್ಯಾಟ್ಸ್ ಮನ್ ಗಳಿದ್ದರು ಅವರಿಂದ ಹೇಳಿಕೊಳ್ಳುವಂತಾ ಬ್ಯಾಟಿಂಗ್ ಪ್ರದರ್ಶನ ನೀಡಲಿಲ್ಲ. 
ಒಟ್ಟಾರೆ ಎರಡೂ ಇನ್ನಿಂಗ್ಸ್ ನಲ್ಲೂ ವಿರಾಟ್ ಕೊಹ್ಲಿ 200 ರನ್ ಬಾರಿಸಿದ್ದರೆ ಉಳಿದ ಒಂಬತ್ತು ಆಟಗಾರರು ಪೇರಿಸಿದ್ದು ಒಟ್ಟಾರೆ 216 ರನ್ ಆಗಿದೆ. 
ಇನ್ನು ಪಂದ್ಯದಲ್ಲಿ ಆಟಗಾರನೊಬ್ಬ ಎರಡೂ ಇನ್ನಿಂಗ್ಸ್ ಗಳಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿ, ಉಳಿದವರು ಒಮ್ಮೆಯೂ 49 ರನ್ ಗಳನ್ನೂ ಗಳಿಸದೆ ಇರುವಂತಹ ಸನ್ನಿವೇಶ್ ಭಾರತ ಟೆಸ್ಟ್ ತಂಡದ ಮಟ್ಟಿಗೆ ಇದು 6ನೇ ಬಾರಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.