ಕ್ರಿಕೆಟ್

2ನೇ ಟೆಸ್ಟ್: ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಭಾರತದ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

2ನೇ ಟೆಸ್ಟ್: ಭಾರತದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್
Published On :
ಲಂಡನ್: ಭಾರತದ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ 2ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ನೀಡಿದ್ದಾರೆ.
ಇನ್ನು 2ನೇ ಟೆಸ್ಟ್ ಪಂದ್ಯ ನಿನ್ನೆಯೇ ಆರಂಭವಾಗಬೇಕಿತ್ತು. ಆದರೆ ಮಳೆಯಿಂದಾಗಿ ಟಾಸ್ ಸೇರಿದಂತೆ ಇಡೀ ಪಂದ್ಯ ಸ್ಥಗಿತವಾಗಿತ್ತು. ಹೀಗಾಗಿ ಎರಡನೇ ದಿನ ಟಾಸ್ ಹಾಕಲಾಯಿತು. ಒಟ್ಟು 5 ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದಿರುವ ಇಂಗ್ಲೆಂಡ್ ತಂಡ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಭಾರತ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಸಮಬಲಕ್ಕಾಗಿ ಹೋರಾಟ ಮಾಡಲಿದೆ.
ತಂಡಗಳು ಇಂತಿವೆ
ಇಂಗ್ಲೆಂಡ್
ಅಲಸ್ಟರ್ ಕುಕ್, ಕೀಟನ್ ಜೆನ್ನಿಂಗ್ಸ್, ಜೋ ರೂಟ್ (ನಾಯಕ), ಒಲ್ಲಿ ಪೋಪ್, ಜಾನಿ ಬೇರ್ ಸ್ಚೋವ್ (ವಿಕೆಟ್ ಕೀಪರ್), ಜಾಸ್ ಬಟ್ಲರ್, ಕ್ರಿಸ್ ವೋಕ್ಸ್, ಸ್ಯಾಮ್ ಕ್ಯುರ್ರಾನ್, ಆದಿಲ್ ರಶೀದ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
ಭಾರತ
ಮುರಳಿ ವಿಜಯ್, ಲೋಕೇಶ್ ರಾಹುಲ್, ಚೇತೇಶ್ವರ್ ಪೂಜಾರಾ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.