ಟೆಸ್ಟ್‌ನಲ್ಲಿ ಹೀನಾಯ ಸೋಲು, ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಕೊಹ್ಲಿ, ರವಿಶಾಸ್ತ್ರಿ ಸ್ಥಾನಕ್ಕೆ ಕುತ್ತು?
ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಂಗ್ಲರ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ...

Published On :
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಂಗ್ಲರ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿಗೆ ಬಿಸಿ ಮುಟ್ಟಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂದಾಗಿದೆ.
ಪಂದ್ಯಗಳ ಸೋಲಿನ ಹೊಣೆಯನ್ನು ಕೋಚ್ ರವಿಶಾಸ್ತ್ರಿ ಹಾಗೂ ಕೊಹ್ಲಿ ಹೊರಬೇಕಿದ್ದು ಬಿಸಿಸಿಐ ಬಿಗ್ ಬಾಸ್ ಗಳು ಕೇಳುವ ಕಠಿಣ ಪ್ರಶ್ನೆಗಳಿಗೆ ಇಬ್ಬರು ಸಿದ್ಧರಾಗಬೇಕಿದೆ. ಆಗಸ್ಟ್ 18ರಿಂದ ನಾಟಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ 3ನೇ ಟೆಸ್ಟ್ ಪಂದ್ಯದ ಫಲಿತಾಂಶವನ್ನು ನೋಡಿಕೊಂಡು ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಬಿಸಿಸಿಐ ತಿಳಿಸಿದೆ.
ಮೂರನೇ ಟೆಸ್ಟ್ ಮುಕ್ತಾಯದ ಬಳಿಕ ಬಿಸಿಸಿಐ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಆಯ್ಕೆ ಮಾಡಲಿದ್ದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ಚಿಂತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿBCCIಬಿಸಿಸಿಐRavi shastriರವಿಶಾಸ್ತ್ರಿಇಂಗ್ಲೆಂಡ್England
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


