ಸ್ಪಾಟ್ ಫಿಕ್ಸಿಂಗ್: ಪಾಕ್ ಆಟಗಾರ ನಾಸೀರ್‌ಗೆ 10 ವರ್ಷ ನಿಷೇಧ ಶಿಕ್ಷೆ
ಸ್ಪಾಟ್ ಫಿಕ್ಸಿಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ನಾಸೀರ್ ಜಮ್ಶೆಡ್ ಗೆ ಕ್ರಿಕೆಟ್ ನಿಂದ 10 ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಲಾಗಿದೆ...

Published On :
ಇಸ್ಲಾಮಾಬಾದ್: ಸ್ಪಾಟ್ ಫಿಕ್ಸಿಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪಾಕಿಸ್ತಾನದ ಮಾಜಿ ಆಟಗಾರ ನಾಸೀರ್ ಜಮ್ಶೆಡ್ ಗೆ ಕ್ರಿಕೆಟ್ ನಿಂದ 10 ವರ್ಷಗಳ ಕಾಲ ನಿಷೇಧ ಶಿಕ್ಷೆ ವಿಧಿಸಲಾಗಿದೆ.
2017ರಲ್ಲಿ ನಡೆದಿದ್ದ ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ನಲ್ಲಿ ನಾಸೀರ್ ಸ್ಪಾಟ್ ಫಿಕ್ಸಿಂಗ್ ಮಾಡಿದ ಆರೋಪ ಎದುರಿಸುತ್ತಿದ್ದು ಇದೀಗ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ವಿರೋಧಿ ನ್ಯಾಯಮಂಡಳಿ 10 ವರ್ಷ ನಿಷೇಧ ಹೇರಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಹೇಳಿದೆ.
ನಾಸೀರ್ ಪಾಕಿಸ್ತಾನ ಪರ 48 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ 2017ರಲ್ಲಿ ಅವರನ್ನು ಕ್ರಿಕೆಟ್ ನ ಎಲ್ಲಾ ಮಾದರಿಯಿಂದಲೂ ಬ್ಯಾನ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
banPakistanಪಾಕಿಸ್ತಾನನಿಷೇಧಸ್ಪಾಟ್ ಫಿಕ್ಸಿಂಗ್Spot FixingNasir JamshedPSL 2017ನಾಸೀರ್ ಜೆಮ್ಶೆಡ್ಪಿಎಸ್ಎಲ್ 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


