ಭಾರತೀಯರು ನಮ್ಮ ಮೇಲೆ ನಂಬಿಕೆ ಕಳೆದುಕೊಂಡಿದ್ರು, ಆದ್ರೆ ನಾವು?: ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ಅಭಿಮಾನಿಗಳು ನಮ್ಮ ಮೇಲೆ ನಂಬಿಕೆ ಕಳೆದುಕೊಂಡಿದ್ದರು...

Published On :
ನಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳ ಹೀನಾಯ ಸೋಲಿನ ಬಳಿಕ ಟೀಂ ಇಂಡಿಯಾ ಅಭಿಮಾನಿಗಳು ನಮ್ಮ ಮೇಲೆ ನಂಬಿಕೆ ಕಳೆದುಕೊಂಡಿದ್ದರು. ಆದರೆ ನಾವು ಕಳೆದುಕೊಂಡಿರಲಿಲ್ಲ ಎಂದ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಾಟಿಂಗ್ ಹ್ಯಾಮ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ಭಾರತೀಯರು ನಮ್ಮ ಮೇಲೆ ನಂಬಿಕೆ ಕಳೆದುಕೊಂಡಿದ್ದರು. ಆದರೆ ನಮ್ಮ ಸಾಮರ್ಥ್ಯದ ಬಗ್ಗೆ ನಾವು ನಂಬಿಕೆ ಕಳೆದುಕೊಂಡಿರಲಿಲ್ಲ. ಹೀಗಾಗಿಯೇ ನಾವು ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ಮೊದಲೆರಡು ಟೆಸ್ಟ್ ಪಂದ್ಯಗಳ ಸೋಲಿನ ಬಳಿಕ ತಂಡದ ಹಲವು ಆಟಗಾರರು ಕುಗ್ಗಿಹೋಗಿದ್ದರು. ಆದರೆ ಡ್ರೆಸ್ಸಿಂಗ್ ರೂಂನಲ್ಲಿ ಮುಂದಿನ ಪಂದ್ಯ ಹೇಗೆ ಗೆಲ್ಲಬೇಕು ಎಂಬುದನ್ನು ಹೆಚ್ಚು ಚರ್ಚಿಸಿದ್ದೇವು. ಜೊತೆಗೆ ನಮ್ಮ ಸಾಮರ್ಥ್ಯವನ್ನು ನಾವು ಚಿಕ್ಕದಾಗಿ ಕಾಣಬಾರದು ಎಂದುಕೊಂಡು ಆಡಿದೆವು ಅದರ ಪ್ರತಿಫಲ ಹೀಗ ಸಿಕ್ಕಿದೆ ಎಂದರು.
ಈ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಗೆಲುವು ನಮಗೆ ಅಗತ್ಯವಾಗಿತ್ತು. ಎಲ್ಲಾ ವಿಭಾಗದಲ್ಲೂ ನಾವು ಉತ್ತಮ ಪ್ರದರ್ಶನವನ್ನು ನೀಡಿದ್ದರ ಫಲ. ಇದು ನಮ್ಮ ಸಂಪೂರ್ಣ ಟೆಸ್ಟ್ ಗೆಲುವು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 1 ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಗೆಲುವಿನ ಆಸೆಯನ್ನು ಉಳಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿಇಂಗ್ಲೆಂಡ್EnglandTrent Bridgeಟ್ರೆಂಟ್ ಬ್ರಿಡ್ಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


