ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್, ಪಾಂಟಿಂಗ್ ವಿಶ್ವದಾಖಲೆ ಮುರಿದ ಕೊಹ್ಲಿ!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್ ನಿಂದ ಈ ಹಿಂದೆ ಕ್ರಿಕೆಟ್ ದಿಗ್ಗಜರು ಮಾಡಿದ್ದ ವಿಶ್ವದಾಖಲೆಗಳನ್ನು ಧೂಳಿಪಟ ಮಾಡುತ್ತಿದ್ದಾರೆ...

Published On :
ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್ ನಿಂದ ಈ ಹಿಂದೆ ಕ್ರಿಕೆಟ್ ದಿಗ್ಗಜರು ಮಾಡಿದ್ದ ವಿಶ್ವದಾಖಲೆಗಳನ್ನು ಧೂಳಿಪಟ ಮಾಡುತ್ತಿದ್ದಾರೆ.
ಟ್ರೆಂಟ್ ಬ್ರಿಜ್ ಟೆಸ್ಟ್ ನಲ್ಲಿ ಅದ್ಭುತ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಗೆಲುವಿಗೆ ಕಾರಣರಾಗಿದ್ದರು. ಇನ್ನು ಈ ಪಂದ್ಯದಲ್ಲಿ ರನ್ ಮಳೆ ಹರಿಸುವ ಮೂಲಕ ಕ್ರಿಕೆಟ್ ದಿಗ್ಗಜ ಡಾನ್ ಬ್ರಾಡ್ಮನ್ ಹಾಗೂ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ರ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ.
ವಿರಾಟ್ ಕೊಹ್ಲಿ ನಾಯಕನಾಗಿ ಪಂದ್ಯವೊಂದರಲ್ಲಿ 7ನೇ ಬಾರಿ 200ಕ್ಕೂ ಅಧಿಕ ರನ್ ಪೇರಿಸಿ ಪಂದ್ಯವನ್ನು ಗೆದ್ದ ಸಾಧನೆಯೊಂದಿಗೆ ಈ ದಿಗ್ಗಜ ಬ್ಯಾಟ್ಸ್ ಮನ್ ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಬ್ರಾಡ್ಮನ್ ಮತ್ತು ರಿಕಿ ಪಾಂಟಿಂಗ್ ತಲಾ 6 ಬಾರಿ ನಾಯಕನಾಗಿ 200ಕ್ಕೂ ಅಧಿಕ ರನ್ ಪೇರಿಸಿದ ಪಂದ್ಯಗಳನ್ನು ಜಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿರಿಕಿ ಪಾಂಟಿಂಗ್ಡಾನ್ ಬ್ರಾಡ್ಮನ್Don Bradman Ricky Ponting
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


