ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಗೆದ್ದಿದ್ದ ಭಾರತಕ್ಕೆ ಸಂಕಷ್ಟ, 4ನೇ ಟೆಸ್ಟ್‌ಗೆ ಅಶ್ವಿನ್ ಡೌಟ್!

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಗಸ್ಟ್ 30ರಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದ್ದು ಪಂದ್ಯಕ್ಕೂ ಮುನ್ನ ಭಾರತಕ್ಕೆ ಸಂಕಷ್ಟ ಎದುರಾಗಿದೆ...

ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಗೆದ್ದಿದ್ದ ಭಾರತಕ್ಕೆ ಸಂಕಷ್ಟ, 4ನೇ ಟೆಸ್ಟ್‌ಗೆ ಅಶ್ವಿನ್ ಡೌಟ್!
ರವಿಚಂದ್ರನ್ ಅಶ್ವಿನ್
Published On :
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಗಸ್ಟ್ 30ರಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದ್ದು ಪಂದ್ಯಕ್ಕೂ ಮುನ್ನ ಭಾರತಕ್ಕೆ ಸಂಕಷ್ಟ ಎದುರಾಗಿದೆ. 
ಟೀಂ ಇಂಡಿಯಾದ ಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗಾಯಗೊಂಡಿದ್ದು ಅವರು ನಾಲ್ಕನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ನಾಟಿಂಗ್ ಹ್ಯಾಮ್ ಟೆಸ್ಟ್ ನಲ್ಲಿ ಕೇವಲ ಒಂದು ವಿಕೆಟ್ ಪಡೆದಿರುವ ಅಶ್ವಿನ್, ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವುದು ಕಂಡು ಬಂದಿತ್ತು. 
ಅಶ್ವಿನ್ ಸದ್ಯ ಕಾಲಿನ ತೊಡೆ ನೋವಿನಿಂದ ಬಳಲುತ್ತಿದ್ದು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭ್ಯಾಸದಲ್ಲಿ ಅಶ್ವಿನ್ ಪಾಲ್ಗೋಳ್ಳುವಿಕೆ ಆಧಾರದಲ್ಲಿ ತಂಡಕ್ಕೆ ಸೇರಿಸಿಕೊಳ್ಳಬೇಕೋ ಅಥವಾ ಬೇಡವೋ ಎಂದು ತೀರ್ಮಾನಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.