ಎಲ್ಲ ಮಾದರಿಯ ಕ್ರಿಕೆಟ್ ನಿಂದ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ನಿವೃತ್ತಿ
ಭಾರತ ತಂಡದ ಮಾಜಿ ಓಪನಿಂಗ್ ಬ್ಯಾಟ್ಸಮನ್ ಗೌತಮ್ ಗಂಭೀರ್ ಎಲ್ಲ ಮಾದರಿಯ ಕ್ರಿಕೆಟ್ ನಿಂದಲೂ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ.

Published On :
ನವದೆಹಲಿ: ಭಾರತ ತಂಡದ ಮಾಜಿ ಓಪನಿಂಗ್ ಬ್ಯಾಟ್ಸಮನ್ ಗೌತಮ್ ಗಂಭೀರ್ ಎಲ್ಲ ಮಾದರಿಯ ಕ್ರಿಕೆಟ್ ನಿಂದಲೂ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ.
ಟೀಂ ಇಂಡಿಯಾದಲ್ಲಿ ತಮ್ಮ ಸುದೀರ್ಘ ಪಯಣದ ಬಳಿಕ ನಿವೃತ್ತಿ ನಿರ್ಧಾರ ಮಾಡಿರುವ ಗಂಭೀರ್, ಸುದ್ದಿ ಸಂಸ್ಥೆಗೆ ತಮ್ಮ ನಿವೃತ್ತಿ ನಿರ್ಧಾರ ಘೋಷಣೆ ಮಾಡಿದ್ದಾರೆ. '15 ವರ್ಷ ದೇಶಕ್ಕಾಗಿ ಕ್ರಿಕೆಟ್ ಆಡಿದ್ದೇನೆ. ಈ ಸುಂದರವಾದ ಆಟದಲ್ಲಿ ಆಡುವುದರಿಂದ ನಾನು ನಿವೃತ್ತಿ ಬಯಸುತ್ತಿದ್ದೇನೆ' ಎಂದಿದ್ದಾರೆ.
ಇನ್ನು ಗಂಭೀರ್ ಕೊನೆಯದಾಗಿ ಡಿಸೆಂಬರ್ 6ರಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯಲಿರುವ ರಣಜಿ ಪಂದ್ಯವಾಡಲಿದ್ದು, ಅದೇ ಅವರ ವೃತ್ತಿ ಜೀವನದ ಕೊನೆಯ ಪಂದ್ಯವಾಗಿರಲಿದೆ. ಅಂತೆಯೇ ಮತ್ತೊಂದು ವಿಶೇಷವೆಂದರೆ ಗೌತಿ ಎಲ್ಲಿ ಕ್ರಿಕೆಟ್ ಜೀವನ ಆರಂಭಿಸಿದರೋ ಅಲ್ಲಿಯೇ ನಿವೃತ್ತಿ ಪಡೆಯುತ್ತಿರುವುದು ವಿಶೇಷ.
1999 ರಿಂದ 2000ರದವರೆಗೆ ಸುಮಾರು ಎರಡು ದಶಕಗಳ ಕಾಲ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡಿದ್ದ ಗೌತಮ್, 2016ರಲ್ಲಿ ಕೊನೆ ಬಾರಿ ಇಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದರು. ಇದುವರೆಗೂ 58 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ ಅವರು ಒಂಬತ್ತು ಶತಕ ಮತ್ತು 22 ಅರ್ಧಶತಕಗಳನ್ನು ಗಳಿಸುವ ಮೂಲಕ ಒಟ್ಟಾರೆ 4,154 ರನ್‌ಗಳನ್ನು ಸಿಡಿಸಿದ್ದಾರೆ.
ಇದಲ್ಲದೆ 147 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 39.68 ರ ಸರಾಸರಿಯಲ್ಲಿ 5238 ರನ್‌ಗಳಿಸಿದ್ದಾರೆ. 37 ಟಿ20 ಪಂದ್ಯಗಳಲ್ಲೂ ಕೂಡ ಗೌತಮ್ ಆಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ನವದೆಹಲಿNew DelhiTeam IndiaBCCIಬಿಸಿಸಿಐನಿವೃತ್ತಿGautam Gambhirಗೌತಮ್ ಗಂಭೀರ್ಭಾರತ ತಂಡretirement
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


