ಇಶಾಂತ್ ಶರ್ಮಾ 'ನೋ ಬಾಲ್‍ಗಳ ಸರದಾರ' ಅಂದ್ರೆ ತಪ್ಪಾಗದು, ಈ ವಿಡಿಯೋ ನೋಡಿ!
ಅಡಿಲೇಡ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಐತಿಹಾಸಿ ಗೆಲುವು ಸಾಧಿಸಿದೆ. ಆದರೆ ಈ ಪಂದ್ಯದಲ್ಲಿನ ಕೆಲ ಘಟನೆಗಳು ಆಸ್ಟ್ರೇಲಿಯನ್ನರ ಕೆಂಗಣ್ಣಿಗೆ ಗುರಿಯಾಗಿದೆ.

Published On :
ಅಡಿಲೇಡ್: ಅಡಿಲೇಡ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಐತಿಹಾಸಿ ಗೆಲುವು ಸಾಧಿಸಿದೆ. ಆದರೆ ಈ ಪಂದ್ಯದಲ್ಲಿನ ಕೆಲ ಘಟನೆಗಳು ಆಸ್ಟ್ರೇಲಿಯನ್ನರ ಕೆಂಗಣ್ಣಿಗೆ ಗುರಿಯಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಸರಿಸುಮಾರು 16 ನೊ ಬಾಲ್ ಗಳನ್ನು ಹಾಕಿದ್ದು ಆದರೆ ಈ ನೋ ಬಾಲ್ ಗಳು ಅಂಪೈರ್ ಗಳ ಗಮನಕ್ಕೆ ಬಾರದೆ ಇರುವುದು ಶೋಚನೀಯ.
ಇಶಾಂತ್ ಶರ್ಮಾ ಎರಡು ಓವರ್ ಗಳಲ್ಲಿ ಆರು ಎಸೆತಗಳಲ್ಲಿ ನಾಲ್ಕು ಎಸೆತಗಳನ್ನು ನೋಬಾಲ್ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಶಾಂತ್ ಶರ್ಮಾ ನೋಬಾಲ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕ್ಕಿ ಪಾಂಟಿಂಗ್ ಅಂಪೈರ್ ಗಳ ವಿರುದ್ಧ ಹರಿಹಾಯ್ದಿದ್ದರು. ಇದೀಗ ಆಸ್ಟ್ರೇಲಿಯಾದ ಬೌಲರ್ ಗಳಾದ ಡೇಮಿಯನ್ ಫ್ಲೇಮಿಂಗ್ ಹಾಗೂ ಬ್ರಾಡ್ ಹಾಡ್ಜ್ ಸಹ ಅಂಪೈರ್ ಗಳ ವರ್ತನೆ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಅಡಿಲೇಡ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 31 ರನ್ ಗಳಿಂದ ಭರ್ಜರಿ ಜಯ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaIshant Sharmaಇಶಾಂತ್ ಶರ್ಮಾCricket Offbeatಕ್ರಿಕೆಟ್ ಸ್ವಾರಸ್ಯBrad Hodgeಬ್ರಾಡ್ ಹಾಡ್ಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


