ಕ್ರಿಕೆಟ್

2ನೇ ಟೆಸ್ಟ್: 326 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್, ಇಶಾಂತ್ ಶರ್ಮಾಗೆ 4 ವಿಕೆಟ್

ಪರ್ತ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಆಸ್ಟ್ರೇಲಿಯಾ 326 ರನ್ ಗಳಿಗೆ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡಿದ್ದು, ಭಾರತದ ಇಶಾಂತ್ ಶರ್ಮಾ 4 ವಿಕೆಟ್ ಪಡೆದಿದ್ದಾರೆ.

2ನೇ ಟೆಸ್ಟ್: 326 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್, ಇಶಾಂತ್ ಶರ್ಮಾಗೆ 4 ವಿಕೆಟ್
ವಿಕೆಟ್ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
Published On :
ಪರ್ತ್: ಪರ್ತ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಆಸ್ಟ್ರೇಲಿಯಾ 326 ರನ್ ಗಳಿಗೆ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡಿದ್ದು, ಭಾರತದ ಇಶಾಂತ್ ಶರ್ಮಾ 4 ವಿಕೆಟ್ ಪಡೆದಿದ್ದಾರೆ.
ಪ್ರವಾಸಿ ಭಾರತ ವಿರುದ್ದ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಆತಿಥೇಯ ಆಸ್ಟ್ರೇಲಿಯಾ 108.3 ಓವರ್‌ಗಳಲ್ಲಿ 326 ರನ್‌ಗಳಿಗೆ ಆಲೌಟ್ ಆಗಿದೆ. ನಿನ್ನೆದಿನದಾಟದ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 277ರನ್ ಪೇರಿಸಿದ್ದ ಆಸ್ಟ್ರೇಲಿಯಾ ಇಂದು ಮತ್ತೆ ಇಶಾಂತ್ ಶರ್ಮಾ ಬೌಲಿಂಗ್ ದಾಳಿಗೆ ತತ್ತರಿಸಿತು. ಪರಿಣಾಮ ಇಂದು 326 ರನ್ ಗಳಿಗೆ ಆಲೌಟ್ ಆಯಿತು. ಇಂದು ದಿನದಾಟ ಆರಂಭಿಸಿದ ಆಸಿಸ್ ಗೆ ನಾಯಕ ಟಿಮ್ ಪೈನ್ ಹಾಗೂ ಪ್ಯಾಟ್ ಕಮ್ಮಿನ್ಸ್ ಉತ್ತರ ಆರಂಭ ನೀಡಿದರು. ಇವರಿಬ್ಬರು ಏಳನೇ ವಿಕೆಟ್‌ಗೆ 59 ರನ್‌ಗಳ ಮಹತ್ವದ ಜತೆಯಾಟ ನೀಡಿದರು.
ಈ ಹಂತದಲ್ಲಿ ಉಮೇಶ್ ಯಾದವ್ ಬೌಲಿಂಗ್ ನಲ್ಲಿ 19 ರನ್ ಗಳಿಸಿದ ಕಮಿನ್ಸ್ ಕ್ಲೀನ್ ಬೌಲ್ಡ್ ಆದರು. ಇದಾದ ಬೆನ್ನಲ್ಲೇ ಉತ್ತಮವಾಗಿ ಆಡುತ್ತಿದ್ದನಾಯಕ ಟಿಮ್ ಪೈನ್‌ ರನ್ನು (38 ರನ್) ಬುಮ್ರಾ ಎಲ್‌ಬಿಡಬ್ಲ್ಯು ಬಲೆಗೆ ಸಿಲುಕಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 326 ರನ್ ಗಳಿಗೆ ಆಲೌಟ್ ಆಯಿತು.
ಇನ್ನು ಭಾರತದ ಪರ ಮೊದಲ ಇನ್ನಿಂಗ್ಸ್ ನಲ್ಲಿ ವೇಗಿಗಳಾದ ಇಶಾಂತ್ ಶರ್ಮಾ ಇಶಾಂತ್ ಶರ್ಮಾ 4 ವಿಕೆಟ್, ಜಸ್ ಪ್ರೀತ್ ಬುಮ್ರಾ, ಉಮೇಶ್ ಯಾದವ್ ತಲಾ 2 ವಿಕೆಟ್ ಪಡೆದರು. ಅಂತೆಯೇ ಉದಯೋನ್ಮುಖ ಆಟಗಾರ ಹನುಮ ವಿಹಾರಿ ಕೂಡ 2 ವಿಕೆಟ್ ಪಡೆದಿದ್ದು ವಿಶೇಷವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.