ಆಸೀಸ್ ಮಾಧ್ಯಮಗಳ ಟೀಕೆಗೆ ಗೋಲಿ ಹೊಡೆದ ಇಶಾಂತ್ ಶರ್ಮಾ
ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾ ಹಲವು ನೋ ಬಾಲ್ ಮಾಡಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ಟೀಕೆ ಮಾಡಿರುವುದಕ್ಕೆ ಡೋಂಟ್ ಕೇರ್ ಎಂದಿದ್ದಾರೆ.

Published On :
ಪರ್ಥ್: ಟೀಂ ಇಂಡಿಯಾದ ವೇಗಿ ಇಶಾಂತ್ ಶರ್ಮಾ ಹಲವು ನೋ ಬಾಲ್ ಮಾಡಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ಟೀಕೆ ಮಾಡಿರುವುದಕ್ಕೆ ಡೋಂಟ್ ಕೇರ್ ಎಂದಿದ್ದಾರೆ.
ನೋ ಬಾಲ್ ಕಮೆಂಟ್ ಬಗ್ಗೆ ಬಹುಶ ಆಸ್ಟ್ರೇಲಿಯಾ ಮಾಧ್ಯಮಗಳೇ ಉತ್ತರ ನೀಡಬೇಕುನಾನಲ್ಲ ಎಂದು ಹೇಳಿದ್ದಾರೆ. ನಾನು ಬಹಳ ಕ್ರಿಕೆಟ್ ಆಡುತ್ತಿದ್ದೇನೆ. ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಯಾಕೆಂದರೆ ನಾನು ಮನುಷ್ಯನೇ ಅಲ್ಲವೇ, ಇಂತಹ ಟೀಕೆಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ಅಡಿಲೇಡ್ ಟೆಸ್ಟ್ ನಲ್ಲಿ ಇಶಾಂತ್ ಶರ್ಮಾ ಅಂಪೈರ್ ಅವರ ಅಟೆನ್ಷನ್ ವಂಚಿಸಿ ಕೆಲವು ನೋ ಬಾಲ್ ಎಂದು ಆಸೀಸ್ ಮಾಧ್ಯಮಗಳು ಬರೆದುಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಇಶಾಂತ್ ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಈ ರೀತಿಗಾಗಿ ಟಾಂಗ್ ಕೊಟ್ಟಿದ್ದಾರೆ.
ಪರ್ತ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾದ ನಾಲ್ಕು ವಿಕೆಟ್ ಗಳನ್ನು ಪಡೆದು ಕಾಂಗರೂಗಳಿಗೆ ಸಿಂಹಸ್ವಪ್ನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


