ಕ್ರಿಕೆಟ್

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲೂ ಕೊಹ್ಲಿಯೇ ಕಿಂಗ್! ನಂತರದ ಸ್ಥಾನದಲ್ಲಿ ಯಾರಿದ್ದಾರೆ ಗೊತ್ತೇ?

ಐಐಸಿ ಟೆಸ್ಟ್ ರ್ಯಾಂಕಿಂಗ್ ಪ್ರಕಟವಾಗಿದ್ದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.

ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲೂ ಕೊಹ್ಲಿಯೇ ಕಿಂಗ್! ನಂತರದ ಸ್ಥಾನದಲ್ಲಿ ಯಾರಿದ್ದಾರೆ ಗೊತ್ತೇ?
ಕೊಹ್ಲಿ
Published On :
ನವದೆಹಲಿ: ಐಐಸಿ ಟೆಸ್ಟ್ ರ್ಯಾಂಕಿಂಗ್ ಪ್ರಕಟವಾಗಿದ್ದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. 
ಪರ್ತ್ ನಲ್ಲಿ ನಡೆದ 2 ನೇ ಟೆಸ್ಟ್ ಪಂದ್ಯದಲ್ಲಿ 123 ರನ್ ಗಳೊಂದಿಗೆ  ಶತಕ ದಾಖಲಿಸಿದ್ದ ಕೊಹ್ಲಿ 934 ಅಂಕಗಳಿಂದ ನಂ.1 ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇನ್ನು  915 ಅಂಕಗಳನ್ನು ಗಳಿಸುವ ಮೂಲಕ 900 ಅಂಕ ದಾಟಿದ ನ್ಯೂಜಿಲ್ಯಾಂಡ್ ತಂಡದ ಮೊದಲ ಕ್ರಿಕೆಟರ್ ಎಂಬ ಖ್ಯಾತಿಗೆ ಭಾಜನರಾಗಿರುವ ಕೇನ್ ವಿಲಿಯಮ್ಸನ್  2 ನೇ ಸ್ಥಾನ ಪಡೆದಿದ್ದಾರೆ. 
ಆಸ್ಟ್ರೇಲಿಯಾ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ 892 ಅಂಕಗಳನ್ನು ಹೊಂದಿದ್ದು ವಿಲಿಯಮ್ಸನ್ ನಂತರದ ಸ್ಥಾನದಲ್ಲಿದ್ದಾರೆ. ಆದರೆ ಚೆಂಡು ವಿರೂಪಗೊಳಿಸಿದ ಪ್ರಕರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಸ್ಟೀವ್ ಸ್ಮಿತ್ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿಲ್ಲ.  ಇನ್ನು ಭಾರತದ ಉಪನಾಯಕ ಅಜಿಂಕ್ಯಾ ರೆಹಾನೆ 15 ನೇ ಸ್ಥಾನದಲ್ಲಿದ್ದರೆ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಬ್ ಪಂತ್ 48 ನೇ ಸ್ಥಾನದಲ್ಲಿದ್ದಾರೆ. 
ಬೌಲರ್ ಗಳ ಪೈಕಿ ಕಾಗಿಸೊ ರಾಬಾಡಾ 882 ಅಂಕಗಳ ಮೂಲಕ ಮೊದಲ ಸ್ಥಾನದ್ಲಲಿದ್ದು, ಇಂಗ್ಲೆಂಡ್ ನ ವೇಗಿ ಜೇಮ್ಸ್ ಆಂಡ್ರಸನ್ ಕೆಲವೇ ಅಂಕಗಳ ಅಂತರದಲ್ಲಿ 2 ನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ಬೌಲರ್ ಗಳಾದ ರವೀಂದ್ರ ಜಡೇಜಾ, 796 ಅಂಕಗಳೊಂದಿಗೆ 5 ನೇ ಸ್ಥಾನದಲ್ಲಿದ್ದರೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 778 ಅಂಕಗಳನ್ನು ಹೊಂದಿದ್ದು 6 ನೇ ಸ್ಥಾನದಲ್ಲಿದ್ದಾರೆ. ವೇಗಿ ಮೊಹಮ್ಮದ್ ಶಮಿ 24 ನೇ ಸ್ಥಾನ ಹಾಗೂ ಜಸ್ಪ್ರೀತ್ ಬೂಮ್ರಾ 28 ನೇ ಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.