ಕುಂಬ್ಳೆ ಕೋಚ್ ಆಗಿ ಮುಂದುವರೆಸಲು ನಾವು ಬಯಸಿದ್ದೇವು, ಆದರೆ? ಕುಂಬ್ಳೆ ರಾಜಿನಾಮೆ ಕುರಿತು ಲಕ್ಷ್ಮಣ್ ಬಿಚ್ಚಿಟ್ಟ ಸತ್ಯ!
ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಡುವಿನ ವೈಮನಸ್ಸಿನಿಂದಾಗಿ ಕೋಚ್ ಸ್ಥಾನಕ್ಕೆ ಕುಂಬ್ಳೆ...

Published On :
ಮುಂಬೈ: ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಡುವಿನ ವೈಮನಸ್ಸಿನಿಂದಾಗಿ ಕೋಚ್ ಸ್ಥಾನಕ್ಕೆ ಕುಂಬ್ಳೆ ರಾಜೀನಾಮೆ ನೀಡಬೇಕಾಗಿ ಬಂತು ಎಂಬ ಮಾತುಗಳು ಎಲ್ಲದೆ ಗಂಭೀರವಾಗಿ ಹರಡಿದೆ.
ಈ ಮಧ್ಯೆ ಮಾತನಾಡಿರುವ ಟೀಂ ಇಂಡಿಯಾ ಸಲಹಾ ಸಮಿತಿಯ ಸದಸ್ಯ ವಿವಿಎಸ್ ಲಕ್ಷ್ಮಣ್ ಅವರು ಅನಿಲ್ ಕುಂಬ್ಳೆ ಅವರನ್ನೆ ಮುಂದಿನ ಅವಧಿಗೂ ಟೀಂ ಇಂಡಿಯಾ ಕೋಚ್ ಆಗಿ ಮುಂದುವರೆಸಲು ಬಿಸಿಸಿಐನ ಕ್ರಿಕೆಟ್ ಸಲಹಾ ಮಂಡಳಿ ಮುಂದಾಗಿತ್ತು. ಅಷ್ಟರಲ್ಲಾಗಲೇ ಅನಿಲ್ ಕುಂಬ್ಳೆ ಹುದ್ದೆ ಬಿಡಲು ನಿರ್ಧಾರ ಮಾಡಿದ್ದರು ಎಂದು ಹೇಳಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಅನಿಲ್ ಕುಂಬ್ಳೆ ನಡುವೆ ಎನು ನಡೆದಿದೆ ಎಂಬುದನ್ನು ನಾವು ಯೋಚಿಸುವುದಿಲ್ಲ. ಆದರೆ ಅವರು ತರಬೇತುದಾರರಾಗಿ ಮುಂದುವರೆಯಬೇಕು ಎಂಬುದು ನಮ್ಮ ಅಭಿಪ್ರಾಯವಾಗಿತ್ತು. ಆದರೆ ತಾವೂ ಆ ಹುದ್ದೆಯಲ್ಲಿ ಮುಂದುವರೆಯಬಾರದು ಎಂಬುದು ಅವರ ಸ್ಪಷ್ಟ ನಿಲುವಾಗಿತ್ತು ಎಂದು ಲಕ್ಷ್ಮಣ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿBCCIಬಿಸಿಸಿಐಅನಿಲ್ ಕುಂಬ್ಳೆAnil Kumbleವಿವಿಎಸ್ ಲಕ್ಷ್ಮಣ್VVS Laxman
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


