ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಅಂತಾ ನಿಮ್ಮಿಂದ ಕಲಿಬೇಕಾ: ಇಮ್ರಾನ್ ಖಾನ್ಗೆ ಕೈಫ್ ತಿರುಗೇಟು!
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಅಲ್ಪ ಸಂಖ್ಯಾತರನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂದು ತಾವು ತೋರಿಸುತ್ತೇವೆ ಎಂದು ಹೇಳಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಅಲ್ಪ ಸಂಖ್ಯಾತರನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂದು ತಾವು ತೋರಿಸುತ್ತೇವೆ ಎಂದು ಹೇಳಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕ್ರಿಕೆಟಿಗ ಮೊಹಮ್ಮದ್ ಕೈಫ್ ತಿರುಗೇಟು ನೀಡಿದ್ದಾರೆ.
ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಅಂತಾ ನಿಮ್ಮಿಂದ ಕಲಿಯಬೇಕಿಲ್ಲ. ಕ್ರಮೇಣವಾಗಿ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಕಡಿಮೆಯಾಗುತ್ತಿದ್ದು ಅಂತಹ ಪಾಕಿಸ್ತಾನ ಇಂದು ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಎಂದು ಜಗತ್ತಿಗೆ ಉಪದೇಶ ನೀಡುತ್ತಿದೆ ಎಂದು ಗೇಲಿ ಮಾಡಿದ್ದಾರೆ.
ಪಾಕಿಸ್ತಾನ ವಿಭಜನೆಯಾದಾಗ ಅಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಶೇಖಡ 20ರಷ್ಟಿತ್ತು ಆದರೆ ಈಗ ಶೇಖಡ 2ರಷ್ಟಕ್ಕಿಂತ ಕಡಿಮೆಯಾಗಿದೆ. ಆದರೆ ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಕ್ರಮೇಣವಾಗಿ ಹೆಚ್ಚಾಗಿದೆ. ಇಂತಹ ಭಾರತ ದೇಶಕ್ಕೆ ಪಾಕಿಸ್ತಾನ ಉಪದೇಶ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬುಲಂದರ್ ಶೆಹರ್ ನಲ್ಲಿ ಗೋಹತ್ಯೆ ಸಂಬಂಧ ಶುರುವಾದ ಗಲಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಮಾತನಾಡಿದ್ದ ನಟ ನಾಸಿರುದ್ದೀನ್ ಶಾ ಭಾರತದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ ಎಂದು ಹೇಳಿದ್ದರು. ಇದಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ತಾವು ತೋರಿಸುತ್ತೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಇಮ್ರಾನ್ ಖಾನ್Imran KhanPakistanಪಾಕಿಸ್ತಾನಅಲ್ಪಸಂಖ್ಯಾತರುMinoritiesMohammad Kaifಮೊಹಮ್ಮದ್ ಕೈಫ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


