ಚೊಚ್ಚಲ ಪಂದ್ಯದಲ್ಲೇ ಮಾಯಾಂಕ್ ಕಮಾಲ್; ಗವಾಸ್ಕರ್ ಮೀರಿಸಿದ ಕನ್ನಡಿಗ!
ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗಿ ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿರುವ ಮೂಲಕ ಕನ್ನಡಿಗ ಮಾಯಾಂಕ್ ಅಗರ್ವಾಲ್ ದಿಗ್ಗಜ ಸುನೀಲ್ ಗವಾಸ್ಕರ್ ರನ್ನು ಹಿಂದಿಕ್ಕಿದ್ದಾರೆ...

Published On :
ಮೆಲ್ಬರ್ನ್: ಟೀಂ ಇಂಡಿಯಾ ತಂಡಕ್ಕೆ ಆಯ್ಕೆಯಾಗಿ ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸಿರುವ ಮೂಲಕ ಕನ್ನಡಿಗ ಮಾಯಾಂಕ್ ಅಗರ್ವಾಲ್ ದಿಗ್ಗಜ ಸುನೀಲ್ ಗವಾಸ್ಕರ್ ರನ್ನು ಹಿಂದಿಕ್ಕಿದ್ದಾರೆ.
ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದ ಮಾಯಾಂಕ್ ಅಗರ್ವಾಲ್ ಚೊಚ್ಚಲ ಪಂದ್ಯದಲ್ಲೇ 76 ರನ್ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.
ಪ್ರಾರಂಭದಲ್ಲಿ ಮಾಯಾಂಕ್ ಅಗರವಾಲ್ ರನ್ನು ತಂಡದಿಂದ ಕೈಬಿಡಲಾಗಿತ್ತಾದರೂ ಉದಯೋನ್ಮುಖ ಪೃಥ್ವಿ ಶಾ ಗಾಯಗೊಂಡ ಹಿನ್ನೆಲೆಯಲ್ಲಿ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗಾಗಿ ಮಾಯಾಂಕ್ ರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು.
ಚೊಚ್ಚಲ ಪಂದ್ಯದಲ್ಲೇ ಅರ್ಧ ಶತಕ ಸಿಡಿಸುವ ಮೂಲಕ ಮಾಯಾಂಕ್ ಮಾಜಿ ದಿಗ್ಗಜ ಸುನೀಲ್ ಗವಾಸ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. 1971ರಲ್ಲಿ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಗವಾಸ್ಕರ್ ಮೊದಲ ಪಂದ್ಯದಲ್ಲೇ ವೆಸ್ಟ್ ಇಂಡೀಸ್ ವಿರುದ್ಧ 65 ರನ್ ಗಳಿಸಿದ್ದರು.
ಇನ್ನು ತಂಡದಲ್ಲಿ ಅವಕಾಶ ಸಿಕ್ಕರೂ ಸರಿಯಾಗಿ ಬಳಸಿಕೊಳ್ಳದ ಕೆಎಲ್ ರಾಹುಲ್ ಅವರಿಗೆ ಟ್ವೀಟರಿಗರನ್ನು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾAustraliaMayank AgarwalRecordದಾಖಲೆSunil Gavaskarಸುನಿಲ್ ಗವಾಸ್ಕರ್Cricket Offbeatಕ್ರಿಕೆಟ್ ಸ್ವಾರಸ್ಯಮಾಯಾಂಕ್ ಅಗರವಾಲ್Test Debut
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


